ಮನೆ ಹವಮಾನ ರಾಯಚೂರು:  ಮಾರ್ಚ್ ​ನಲ್ಲಿ 20 ವರ್ಷಗಳ ಗರಿಷ್ಠ ಮಟ್ಟಕ್ಕೆ ಉಷ್ಣಾಂಶ

ರಾಯಚೂರು:  ಮಾರ್ಚ್ ​ನಲ್ಲಿ 20 ವರ್ಷಗಳ ಗರಿಷ್ಠ ಮಟ್ಟಕ್ಕೆ ಉಷ್ಣಾಂಶ

0

ರಾಯಚೂರು: ರಾಯಚೂರಿನಲ್ಲಿ ತಾಪಮಾನ ತೀವ್ರವಾಗಿ ಏರಿಕೆ ಕಂಡಿದ್ದು, ಮಾರ್ಚ್​ ತಿಂಗಳ ಉಷ್ಣಾಂಶ 20 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.

Join Our Whatsapp Group

20 ವರ್ಷಗಳ ಅವಧಿಯಲ್ಲಿನ ಮಾರ್ಚ್ ತಿಂಗಳ ಜಿಲ್ಲೆಯ ಸರಾಸರಿ ತಾಪಮಾನ 0.5 ಡಿಗ್ರಿಯಷ್ಟು ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಕೆಯಾಗಿದೆ. ಮುಂಬರುವ ದಿನಗಳಲ್ಲಿ °ತಾಪಮಾನ 41 ಡಿಗ್ರಿ ಗಡಿ ದಾಟುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಯಚೂರು ಜಿಲ್ಲೆಯ ಜನ ಬಿಸಿಲ ಬೇಗೆಯಲ್ಲಿ ಬೇಯುತ್ತಿರುವಂತಾಗಿದೆ.

ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಅತ್ಯಧಿಕ, ಅಂದರೆ 42.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದ‌ರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿನ್ನೆ 41 ಡಿಗ್ರಿಯಿಂದ ನಿಂದ 42.6 ಡಿಗ್ರಿ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (KSNDMC) ಹವಾಮಾನ ನಿರ್ವಹಣಾ ಜಾಲದ ಮಾಹಿತಿ ಪ್ರಕಾರ, ರಾಯಚೂರು ಜಿಲ್ಲೆಯ 10 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 9 ಸ್ಥಳಗಳು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ 4 ಸ್ಥಳಗಳು, ಬಳ್ಳಾರಿ ಜಿಲ್ಲೆಯಲ್ಲಿ 3 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 2 ಸ್ಥಳಗಳು, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ತಲಾ 1 ಸ್ಥಳಗಳಲ್ಲಿ, ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಶುಕ್ರವಾರ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವಾಡಿಕೆಗಿಂತ (1.6 ಡಿಗ್ರಿಯಿಂದ 3 ಡಿಗ್ರಿ ಸೆಲ್ಸಿಯಸ್​) ನಷ್ಟು ಅಧಿಕ ತಾಪಮಾನವು ದಾಖಲಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಜನ ಬಿಸಿಲ ಬೇಗೆಯಿಂದಾಗಿ ಮನೆಯಿಂದ ಹೊರ ಬಾರದೆ ಇರುವುದರಿಂದ ರಸ್ತೆಗಳು ಬಿಕೋ ಎನ್ನುತ್ತಿವೆ. ಅನಿವಾರ್ಯ ಸಂದರ್ಭಗಳಲ್ಲಿ ಜನ ಹೊರಹೋಗುವುದಿದ್ದರೂ ಛತ್ರಿ ಹಿಡಿದು, ಮುಖಕ್ಕೆ‌ ಸ್ಕಾರ್ಪ್ ಹಾಕಿಕೊಂಡೇ ಓಡಾಡುವ ಸ್ಥಿತಿ ಇದೆ.

ಇನ್ನು ಮಕ್ಕಳು, ವೃದ್ಧರು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆ ನಡುವಣ ಅವಧಿಯಲ್ಲಿ ಹೊರಗೆ ಓಡಾಡದಂತೆ ಸಲಹೆ ನೀಡಲಾಗಿದೆ. ಸನ್ ಸ್ಟ್ರೋಕ್, ನಿರ್ಜಲೀಕರಣದಂತಹ ಸಮಸ್ಯೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ತಜ್ಞರ ಸಲಹೆ ನೀಡಿದ್ದಾರೆ.