ಮನೆ ಅಪರಾಧ ಪರಾರಿಗೆ ಯತ್ನಿಸಿದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ: ಕಾಲಿಗೆ ಗುಂಡಿಟ್ಟ ಪೊಲೀಸರು

ಪರಾರಿಗೆ ಯತ್ನಿಸಿದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ: ಕಾಲಿಗೆ ಗುಂಡಿಟ್ಟ ಪೊಲೀಸರು

0

ಬೆಂಗಳೂರು (Bengaluru)- ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಆರೋಪಿ ನಾಗೇಶ್‌ ನನ್ನು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತರುವ ವೇಳೆ ತಪ್ಪಿಸಿಕೊಳ್ಳುವ ಯತ್ನಿಸಿದ ನಾಗೇಶ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ನಿನ್ನೆಯಷ್ಟೇ ಪೊಲೀಸರು ನಾಗೇಶ್‌ ನನ್ನು ತಮಿಳುನಾಡಿನ ತಿರುವಣ್ಣಾಮಲೈ ಮಠವೊಂದರಲ್ಲಿ ಸ್ವಾಮೀಜಿಯಂತೆ ವೇಷ ಮರೆಸಿಕೊಂಡಿದ್ದ ವೇಳೆ ಬಂಧಿಸಿದ್ದರು. ಬಂಧಿತನನ್ನು ತಮಿಳುನಾಡಿನಿಂದ ಬೆಂಗಳೂರಿಗೆ ಕರೆತರುವ ವೇಳೆ ಆರೋಪಿ ಕೆಂಗೇರಿಯ ಮೇಲ್ಸೇತುವೆ ಬಳಿ ಮೂತ್ರ ವಿಸರ್ಜನೆಗೆ ಗಾಡಿ ನಿಲ್ಲಿಸುವಂತೆ ಮನವಿ ಮಾಡಿದ್ದ.

ಆಗ ವಾಹನ ನಿಲ್ಲಿಸುತ್ತಿದ್ದಂತೆ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆತನನ್ನು ಹಿಡಿಯಲು ಹೋದ ಪೇದೆ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಅವನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಕಾನ್ಸ್‌ ಸ್ಟೇಬಲ್‌ ಮಹಾದೇವಯ್ಯ ಅವರಿಗೂ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರು ಪಶ್ಚಿಮ ಡಿಸಿಪಿ ಪಾಟೀಲ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತನ ವಿಚಾರಣೆ ನಡೆಸಿದ ಬಳಿಕ ಕೃತ್ಯವೆಸಗಲು ಅಸಲಿ ಕಾರಣವೇನು ತಿಳಿದುಬರಲಿದೆ.