ಮನೆ ರಾಷ್ಟ್ರೀಯ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ

0

ನವದೆಹಲಿ: ಹೊಸ ಹಣಕಾಸು ವರ್ಷದ ಮೊದಲ ದಿನ ಎಲ್ ​​ಪಿಜಿ ದರವನ್ನು ಕಡಿಮೆ ಮಾಡಲಾಗಿದ್ದು, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ.

Join Our Whatsapp Group

ಇನ್ನು 5ಕೆಜಿ ಎಫ್​ ಟಿಎಲ್ (ಫ್ರೀ ಟ್ರೇಡ್​ ಎಲ್​ಪಿಜಿ)​ ಸಿಲಿಂಡರ್​ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೇ ಅನ್ವಯವಾಗಲಿದೆ.

ದೆಹಲಿಯಲ್ಲಿ 19 ಕೆಜಿ ಎಲ್​ಪಿಜಿ ಸಿಲಿಂಡರ್​ ಬೆಲೆ 30.50 ರೂ, ಮುಂಬೈನಲ್ಲಿ 31.50 ರೂ. ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32 ರೂ. ಕಡಿಮೆಯಾಗಿದೆ. ಬೆಲೆ ಇಳಿಕೆ ನಂತರ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್​ 1764.50 ರೂ. ಗಳಿಗೆ ಲಭ್ಯವಾಗಲಿದೆ. ಇನ್ನು ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ 1717.50 ರೂ. ಇದೆ. ಕೋಲ್ಕತ್ತಾದಲ್ಲಿ 1879 ರೂ. ಮತ್ತು ಚೆನ್ನೈನಲ್ಲಿ 1930 ರೂ. ಮತ್ತು ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ 1830 ರೂ. ಇಳಿಕೆಯಾಗಿದೆ.