ಮನೆ ರಾಷ್ಟ್ರೀಯ ದೆಹಲಿಯಲ್ಲಿ ಅಗ್ನಿ ಅವಘಡ: 27 ಮಂದಿ ಸಜೀವ ದಹನ

ದೆಹಲಿಯಲ್ಲಿ ಅಗ್ನಿ ಅವಘಡ: 27 ಮಂದಿ ಸಜೀವ ದಹನ

0

ನವದೆಹಲಿ(New Delhi)-ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪವಿರುವ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿಯವರೆಗೂ 27 ಮಂದಿ ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.

ಮುಂಡ್ಕಾ ಮೆಟ್ರೋ ನಿಲ್ದಾಣದ ಪಿಲ್ಲರ್ ಸಂಖ್ಯೆ 544ರ ಸಮೀಪವಿರುವ ಮೂರಂತಸ್ಥಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.

ದೆಹಲಿಯ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಿಸಿಟಿವಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹಲವು ಕಾರ್ಮಿಕರು ಕಟ್ಟಡದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. 

ಸುಮಾರು 60-70 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು ಇನ್ನು ಹಲವು ಕಟ್ಟಡದೊಳಗೆ ಸಿಲುಕಿಕೊಂಡಿದ್ದಾರೆ ಎಂದು ಅಗ್ನಿಶಾಮಕ ಸಿಬ್ಬಂದಿಗಳು ತಿಳಿಸಿದ್ದಾರೆ. 

ಕಂಪನಿಯ ಮಾಲೀಕರಾದ ಹರೀಶ್ ಗೋಯೆಲ್ ಮತ್ತು ವರುಣ್ ಗೋಯೆಲ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ್ಟಡದ ಮಾಲೀಕರನ್ನು ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದ ಮನೀಶ್ ಲಾಕ್ರಾ ಎಂದು ಗುರುತಿಸಲಾಗಿದ್ದು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಆತಂಕವಾಗಿದೆ. ಇದೊಂದು ದುರದೃಷ್ಟಕರ ಘಟನೆಯಾಗಿದ್ದು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಪ್ರಾಣಹಾನಿಯಾಗಿರುವುದು ಅತೀವ ದುಃಖ ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.