ರಿಷಭ್ ಶೆಟ್ಟಿ ನಿರ್ಮಾಣ ಮಾಡುತ್ತಿರುವ “ಲಾಫಿಂಗ್ ಬುದ್ಧ’ ಸಿನಿಮಾ ಶೂಟಿಂಗ್ ಕೆಲಸಗಳು ಈಗಾಗಲೇ ಮುಗಿದಿವೆ. ಭರತ್ ರಾಜ್ ಎಂ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.
ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸುತ್ತಿದ್ದಾರೆ. ಇನ್ನುಳಿದಂತೆ ತೇಜು ಬೆಳವಾಡಿ, ಸುಂದರ್ ರಾಜ್ ಸೇರಿ ಇನ್ನೂ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ.
ಭದ್ರಾವತಿ, ಜೋಗ, ಸಾಗರ, ಬೆಂಗಳೂರು ಸುತ್ತಮುತ್ತ ಚಿತ್ರದ ಶೂಟಿಂಗ್ ಮಾಡಲಾಗಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಈಗಾಗಲೇ ಮುಗಿದಿದ್ದು, ಶೀಘ್ರದ ಲ್ಲಿಯೇ ಲಾಫಿಂಗ್ ಬುದ್ಧ ಚಿತ್ರಮಂದಿರಕ್ಕೆ ಬರಲಿದೆ.
ಅಂದಹಾಗೆ,ಚಿತ್ರತಂಡ ಪೊಲೀಸ್ ಧ್ವಜ ದಿನದ ಪ್ರಯುಕ್ತ ಕರ್ನಾಟಕ ಪೊಲೀಸ್ ಇಲಾಖೆಗೆ ಶುಭಾಶಯಗಳನ್ನು ತಿಳಿಸಿದೆ. ಧೈರ್ಯದ ಮತ್ತೊಂದು ಹೆಸರು ಮತ್ತು ಪ್ರತೀಕವಾಗಿರುವ ಕೆಚ್ಚೆದೆಯ ಪೊಲೀಸರಿಗೆ ನಮ್ಮ ಲಾಫಿಂಗ್ ಬುದ್ಧ ಚಿತ್ರತಂಡದಿಂದ ಅಭಿನಂದನೆಗಳು ಎಂದಿದೆ.














