ಮನೆ ಅಪರಾಧ ಮೂವರು ಪೊಲೀಸರು ದುಷ್ಕರ್ಮಿಗಳ ಗುಂಡಿಗೆ ಬಲಿ

ಮೂವರು ಪೊಲೀಸರು ದುಷ್ಕರ್ಮಿಗಳ ಗುಂಡಿಗೆ ಬಲಿ

0
ಸಾಂದರ್ಭಿಕ ಚಿತ್ರ

ಭೋಪಾಲ್‌: ಶನಿವಾರ ನಸುಕಿನಲ್ಲಿ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಮೂವರು ಪೊಲೀಸರು ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿರುವ ಘಟನೆ ಅರಾನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಮುಂಜಾನೆ 3 ಗಂಟೆಯ ಸುಮಾರಿನಲ್ಲಿ ಪೊಲೀಸ್ ಸಿಬ್ಬಂದಿ ದುಷ್ಕರ್ಮಿಗಳನ್ನು ಸೆರೆಹಿಡಿಯಲು ಹೋದಾಗ ಅವರ ಮೇಲೆ ದಾಳಿ ನಡೆದಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜ್‌ಕುಮಾರ್ ಜಾತವ್ ಮತ್ತು ಕಾನ್‌ಸ್ಟೆಬಲ್‌ಗಳಾದ ನಿಲೇಶ್ ಭಾರ್ಗವ ಮತ್ತು ಶಾಂತಾರಾಮ್ ಮೀನಾ ಅವರು ಗುಂಡಿನ ದಾಳಿಯಲ್ಲಿ ಅಸುನೀಗಿದ್ದಾರೆ.

ಘಟನೆ ವಿವರ: ಅಪರೂಪದ ನಾಲ್ಕು ಜಿಂಕೆಗಳನ್ನು ಕೆಲವು ದುಷ್ಕರ್ಮಿಗಳು ಕೊಂದಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ, ಗುನಾ ಜಿಲ್ಲೆಯ ಅರೋನ್ ಪೊಲೀಸ್ ಠಾಣೆ ವ್ಯಾಪ್ತಿಯ ಸ್ಥಳವೊಂದಕ್ಕೆ ತೆರಳಿದ್ದರು. ಪೊಲೀಸ್ ಸಿಬ್ಬಂದಿ ಆರೋಪಿಗಳನ್ನು ಎಲ್ಲಾ ಕಡೆಯಿಂದ ಸುತ್ತುವರೆದಿದ್ದರು. ಆಗ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಮೂವರು ಪೊಲೀಸರು ಮೃತಪಟ್ಟಿದ್ದಾರೆ.

ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ನರೋತ್ತಮ ಮಿಶ್ರಾ ತಿಳಿಸಿದರು.