ಮನೆ ಉದ್ಯೋಗ ಕಾನೂನು ಪದವೀಧರರಿಗೆ ಹೈಕೋರ್ಟ್ ನಲ್ಲಿ ಉದ್ಯೋಗಾವಕಾಶ

ಕಾನೂನು ಪದವೀಧರರಿಗೆ ಹೈಕೋರ್ಟ್ ನಲ್ಲಿ ಉದ್ಯೋಗಾವಕಾಶ

0

ಬೆಂಗಳೂರು: ರಾಜ್ಯ ಹೈಕೋರ್ಟ್ ನಲ್ಲಿ ಖಾಲಿ ಇರುವ ಲಾ ಕ್ಲರ್ಕ್-ಕಮ್-ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಹೈಕೋರ್ಟ್ ನೋಟಿಫಿಕೇಷನ್ ಹೊರಡಿಸಿದೆ.

Join Our Whatsapp Group

ಒಟ್ಟು 8 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಏಪ್ರಿಲ್ 17 ರ ಒಳಗೆ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದೊಂದಿಗೆ ಕಾನೂನು ಪದವಿಯನ್ನು ಶೇ 50ರಷ್ಟು ಅಂಕದೊಂದಿಗೆ ಉತ್ತೀರ್ಣಗೊಂಡಿರಬೇಕು. ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ನೋಂದಾಯಿಸಿಕೊಂಡಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ವಿಷಯ ಸಂಬಂಧಿತ ಕೌಶಲ್ಯವನ್ನು ಹೊಂದಿರಬೇಕು. ಇವರು ನ್ಯಾಯಾಂಗದ ಕೆಲಸದ ಜೊತೆಗೆ ಆಡಳಿತಾತ್ಮಕದ ಕೆಲಸದಲ್ಲೂ ಸಹಾಯ ಮಾಡಬೇಕಿರುತ್ತದೆ.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25 ಸಾವಿರ ರೂಪಾಯಿ ಗೌರವಧನವನ್ನು ನೀಡಲಾಗುತ್ತದೆ.

ಈ ಹುದ್ದೆಗೆ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೋಟಿಫಿಕೇಷನ್ ನಲ್ಲಿ ತಿಳಿಸಲಾಗಿದೆ.

ನೋಟಿಫಿಕೇಷನ್ ಗೆ ಈ ಲಿಂಕ್ ಕ್ಲಿಕ್ ಮಾಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ