ಮನೆ ರಾಜ್ಯ ಬಳ್ಳಾರಿ: ದೇವರ ಮೂರ್ತಿ ಕೂರಿಸುವ ವಿಚಾರವಾಗಿ ಎರಡು ಸಮುದಾಯದ ನಡುವೆ ಕಲ್ಲು ತೂರಾಟ

ಬಳ್ಳಾರಿ: ದೇವರ ಮೂರ್ತಿ ಕೂರಿಸುವ ವಿಚಾರವಾಗಿ ಎರಡು ಸಮುದಾಯದ ನಡುವೆ ಕಲ್ಲು ತೂರಾಟ

0

ಬಳ್ಳಾರಿ: ದೇವರ ಮೂರ್ತಿ ಕುರಿಸುವ ವಿಚಾರವಾಗಿ ಎರಡು ಸಮುದಾಯದ ನಡುವೆ ಶುರುವಾದ ವಾಗ್ವಾದ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟವಾಗಿರುವ ಘಟನೆ ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಪವಾಡ ಪುರುಷ ಎರ್ರಿತಾತಾ ಸ್ವಾಮಿಯ ಮೂರ್ತಿ ಕೂರಿಸುವ ವಿಚಾರವಾಗಿ ಈ ಗಲಾಟೆ ನಡೆದಿದೆ.

15 ದಿನಗಳ ಹಿಂದೆ ಎರ್ರಿಸ್ವಾಮಿ ಮಠದಲ್ಲಿ ರಾತ್ರೋರಾತ್ರಿ ಮೂರ್ತಿ ಕುರಿಸಲಾಗಿತ್ತು. ಈ ಮೂರ್ತಿಯನ್ನು ತೆರವುಗೊಳಿಸುವಂತೆ ಇನ್ನೊಂದು ಸಮುದಾಯದವರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಮೂರ್ತಿ ತೆರವುಗೊಳಿಸಲು ಆದೇಶ ನೀಡಿತ್ತು. ಆದರೆ ಪವಾಡ ಪುರುಷನ ಮೂರ್ತಿಯನ್ನು ತೆರವುಗೊಳಿಸಲ್ಲ ಅಂತ ಮೊತ್ತೊಂದು ಸಮುದಾಯದವರು ಹಠ ಹಿಡಿದ್ದಾರೆ. ಇದರಿಂದ ಎರಡು ಸಮುದಾಯದ ಮಧ್ಯೆ ವಾಗ್ವಾದ ಸಂಭವಿಸಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ಸಂಭವಿಸಿದೆ.

ಈ ವಿಚಾರ ತಿಳಿದು ಗ್ರಾಮಕ್ಕೆ ಪಿಎಸ್ಐ ಸಂತೋಷ್ ಡಬ್ಬಿನ್, ಸಿಪಿಐ ಸತೀಶ್ ಸೇರಿದಂತೆ ಇನ್ನಿತರ ಪೊಲೀಸ್​ ಸಿಬ್ಬಂದಿ ಬಂದಿದ್ದಾರೆ.

ಕಲ್ಲು ತೂರಾಟವನ್ನು ನಿಲ್ಲಿಸಲು ಮುಂದಾದಾಗ ಕಿಡಿಗೇಡಿಗಳು ಪೊಲೀಸರ ಮೇಲೂ ಕಲ್ಲು ಎಸೆದಿದ್ದಾರೆ. ಇದರಿಂದ ಪಿಎಸ್ಐ ಸಂತೋಷ್ ಡಬ್ಬಿನ್ ತಲೆಗೆ, ಸಿಪಿಐ ಸತೀಶ್ ಸೇರಿದಂತೆ ಮೂವರಿಗೆ ಗಾಯವಾಗಿದೆ. ಕೂಡಲೆ ಪಿಎಸ್​ಐ ಸಂತೋಷ್ ಅವರನ್ನು ಬಳ್ಳಾರಿ ಟ್ರಾಮಾ ಕೇಕ್ ​ಸೆಂಟರ್ ​ಗೆ ಕರೆದುಕೊಂಡು ಹೋಗಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.

ಘಟನಾ ಸ್ಥಳಕ್ಕೆ‌ ಎಸ್ಪಿ ಮತ್ತು‌ ಎಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ಗುಂಪಿನ ಕಡೆಯಿಂದ 30ಕ್ಕೂ ಹೆಚ್ಚ ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎರ್ರಿಸ್ವಾಮಿ ಮಠದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.