ಮನೆ ಅಪರಾಧ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಎರಡು ಕಾರುಗಳ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

0

ಶಿವಮೊಗ್ಗ: ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ನಿದಿಗೆ ಗ್ರಾಮದ ಬಳಿ ಸೋಮವಾರ ನಡೆದಿದೆ.

Join Our Whatsapp Group

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದು ಕಾರಿನಲ್ಲಿದ್ದ  ಶಿವಮೊಗ್ಗ ನಗರದ ಮೇಘರಾಜ್ ಸಾವನ್ನಪ್ಪಿದ್ದಾರೆ.

ಮೇಘರಾಜ್ ಮಾಚೇನಹಳ್ಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ತೆರಳುವ ವೇಳೆ ಅಪಘಾತವಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.