ಮನೆ ಕ್ರೀಡೆ ಐಪಿಎಲ್​ ನಲ್ಲಿ ವಿಶೇಷ ದಾಖಲೆ ಬರೆದ ರವೀಂದ್ರ ಜಡೇಜಾ

ಐಪಿಎಲ್​ ನಲ್ಲಿ ವಿಶೇಷ ದಾಖಲೆ ಬರೆದ ರವೀಂದ್ರ ಜಡೇಜಾ

0

ಇಂಡಿಯನ್ ಪ್ರೀಮಿಯರ್ ಲೀಗ್​ ನ 22ನೇ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ರವೀಂದ್ರ ಜಡೇಜಾ ವಿಶೇಷ ದಾಖಲೆ ಬರೆದಿದ್ದಾರೆ.

Join Our Whatsapp Group

ಅದು ಕೂಡ ಐಪಿಎಲ್​ ನಲ್ಲಿ ಇದುವರೆಗೆ ಯಾರೂ ಸಹ ಬರೆಯದ ದಾಖಲೆ ನಿರ್ಮಿಸುವ ಮೂಲಕ ಎಂಬುದು ವಿಶೇಷ. ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಮೊದಲು ಬೌಲಿಂಗ್ ಮಾಡಿತು.

ಅದರಂತೆ ಅತ್ಯುತ್ತಮ ಸ್ಪಿನ್ ದಾಳಿ ಸಂಘಟಿಸಿದ ರವೀಂದ್ರ ಜಡೇಜಾ 4 ಓವರ್​ಗಳಲ್ಲಿ 18 ರನ್ ನೀಡಿ 3 ವಿಕೆಟ್ ಕಬಳಿಸಿದರು. ಹಾಗೆಯೇ ಈ ಪಂದ್ಯದಲ್ಲಿ ಜಡೇಜಾ 2 ಅತ್ಯುತ್ತಮ ಕ್ಯಾಚ್​ಗಳನ್ನು ಸಹ ಹಿಡಿದಿದ್ದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ 100 ಕ್ಯಾಚ್​ಗಳನ್ನು ಹಿಡಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾದರು.

ಅಲ್ಲದೆ ಐಪಿಎಲ್​ನಲ್ಲಿ 1000+ ರನ್, 100 ಕ್ಯಾಚ್ ಹಾಗೂ 100+ ವಿಕೆಟ್ ಪಡೆದ ಮೊದಲ ಆಟಗಾರ ಎಂಬ ದಾಖಲೆಯನ್ನು ರವೀಂದ್ರ ಜಡೇಜಾ ತಮ್ಮದಾಗಿಸಿಕೊಂಡರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಯಾರು ಮಾಡದ ವಿಶೇಷ ಸಾಧನೆಯನ್ನು ಮಾಡಿದರು.

ಐಪಿಎಲ್​ ನಲ್ಲಿ ರಾಜಸ್ಥಾನ್ ರಾಯಲ್ಸ್, ಗುಜರಾತ್ ಲಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿರುವ ಜಡೇಜಾ 156 ವಿಕೆಟ್ಸ್​, 2776 ರನ್ಸ್​ ಹಾಗೂ 100 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಐಪಿಎಲ್​ನ ಅತ್ಯಂತ ಬೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 137 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 17.4 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 141 ರನ್​ಗಳಿಸಿ, 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.