ಮನೆ ಅಪರಾಧ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು: ಐವರು ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು: ಐವರು ಸ್ಥಳದಲ್ಲೇ ಸಾವು

0

ಚೆನ್ನೈ: ತಮಿಳುನಾಡಿನ ಮದುರೈ ಸಮೀಪ ತಲವೈಪುರ ಬಳಿ ಬುಧವಾರ ಚಾಲಕನ ನಿಯಂತ್ರಣ ತಪ್ಪಿದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ಒಂದೇ ಕುಟುಂಬದ ನಾಲ್ವರು ಸೇರಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Join Our Whatsapp Group

ಕಾರಿಗೆ ಅಡ್ಡಲಾಗಿ ಬಂದ ಅಪರಿಚಿತ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಕಾರು ಚಾಲಕ, ಏಕಾಏಕಿ ಬ್ರೇಕ್‌ ಹಾಕಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಅಸುನೀಗಿದ್ದಾರೆ.

ಆ್ಯಕ್ಸಿಡೆಂಟ್‌ ಆಗಿರುವ ವಿಡಿಯೋ ಈಗ ಜಾಲತಾಣಗಳಲ್ಲಿ ವೈರಲ್‌ ಆಗಿದೆ.