ಮನೆ ರಾಜ್ಯ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಚಿವ ಕೆ.ಗೋಪಾಲಯ್ಯ ಚಾಲನೆ

ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಚಿವ ಕೆ.ಗೋಪಾಲಯ್ಯ ಚಾಲನೆ

0

ಬೆಂಗಳೂರು (Bengaluru)-ಉಚಿತ ಆರೋಗ್ಯ ತಪಾಸಣಾ ಶಿಬಿರಗಳ‌‌ ಉಪಯೋಗವನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕೆಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಕರೆ ನೀಡಿದರು.

ಮಹಾಲಕ್ಷ್ಮಿ ಲೇ‌ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮಕೃಷ್ಣ ನಗರದ ಪ್ರಸನ್ನ ಗಣಪತಿ ಟ್ರಸ್ಟ್ ನಲ್ಲಿಂದು ಮಹಾಲಕ್ಷ್ಮಿ ಎಜುಕೇಷನ್‌ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ‌ ಅವರು ಮಾತನಾಡಿದರು.

ಕ್ಷೇತ್ರದ ಜನರ ಉತ್ತಮ ಆರೋಗ್ಯಕ್ಕಾಗಿ ಪ್ರತಿ ತಿಂಗಳು ಕ್ಷೇತ್ರದ ಹಲವೆಡೆ ಉಚಿತ ಆರೋಗ್ಯ ತಪಾಸಣಾ  ಶಿಬಿರಗಳನ್ನು ನಡೆಸಿ ಔಷಧಿಗಳನ್ನು ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರಿಗೆ ಇತರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಕೂಲ ಮಾಡಿಕೊಡಲಾಗುತ್ತಿದ್ದು, ಪ್ರತಿಯೊಬ್ಬರೂ ಇದರ ಉಪಯೋಗಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಕಣ್ಣು, ಹೃದಯ, ಶ್ವಾಸಕೋಶ, ಗರ್ಭಕೋಶ, ರಕ್ತದೊತ್ತಡ, ಸಕ್ಕರೆ ಖಾಯಿಲೆಗಳಿಗೆ ಉಚಿತ ತಪಾಸಣೆ ಮತ್ತು ಔಷಧಿಗಳನ್ನು ನೀಡಲಾಗುತ್ತಿದೆ. ಕಣ್ಣಿನ ತೊಂದರೆ ಇರುವವರಿಗೆ ಶಸ್ತ್ರಚಿಕಿತ್ಸೆ ಮಾಡಿ ಕನ್ನಡಗಳನ್ನೂ ಕೂಡ ನೀಡಲಾಗುವುದು ಎಂದರು.