ಬೆಂಗಳೂರು: ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿದಳು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಬಂಧಿಸಲಾಗಿದೆ ಎಂದು ಎನ್ಎಐ ಮೂಲಗಳು ತಿಳಿಸಿವೆ.
ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ.
ಐಇಡಿ ತಂದಿದ್ದ ಮುಸಾವೀರ್ ಹಾಗೂ ಸ್ಫೋಟಕ್ಕೆ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು ಎಂದು ಹೇಳಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಇವರಿಗೆ ಸಹಾಯ ಮಾಡಿದ್ದ ಮುಜಾಮೀಲ್ ಷರೀಫ್ ಎಂಬಾತನನ್ನು ಕೂಡ ಬಂಧಿಸಲಾಗಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.
10 ಲಕ್ಷ ರೂ ಬಹುಮಾನ ಘೋಷಣೆ
ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್ಐಎ ಶೋಧ ನಡೆಸಿತ್ತು. ಅಲ್ಲದೇ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಬ್ಲಾಸ್ಟ್ ನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಹಾಗೂ ಮಸಾವೀರ್ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿತ್ತು. ಇಬ್ಬರ ಫೋಟೋ ರಿಲೀಸ್ ಮಾಡಿದ್ದ ಎನ್ಐಎ ಅಧಿಕಾರಿಗಳು, ಈ ಇಬ್ಬರ ಬಗ್ಗೆಯೂ ಸುಳಿವು ನೀಡುವಂತೆ ಮನವಿ ಮಾಡಿದ್ದರು. ಸುಳಿವು ನೀಡಿದವರಿಗೆ ಇಬ್ಬರ ಸುಳಿವಿಗೂ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದರು.
ಇನ್ನು ಬಂಧನ ತಪ್ಪಿಸಿಕೊಳ್ಳಲು ಇಬ್ಬರೂ ಶಂಕಿತ ಉಗ್ರರು ಅಸ್ಸಾಂ ಮತ್ತು ಬಂಗಾಳದಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದರು ಎಂದು ಹೇಳಲಾಗಿದೆ. ಆದರೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಎನ್ಐಎ ತಂಡ ಇದೀಗ ಇಬ್ಬರೂ ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಮಾರ್ಚ್ 1 ರಂದು ವೈಟ್ಫೀ ಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಈ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದರು. ಬಳಿಕ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲಾಗಿದ್ದು, ಶಂಕಿತ ಉಗ್ರನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.