ರೇವಾ (ಮಧ್ಯಪ್ರದೇಶ) : ಸ್ನೇಹಿತರೊಂದಿಗೆ ಆಟವಾಡುವಾಗ ಜಮೀನಿನಲ್ಲಿದ್ದ ಬಾಲಕನೊಬ್ಬ 60 ಅಡಿ ಆಳದ ತೆರೆದ ಬೋರ್ ವೆಲ್ ಗೆ ಬಿದ್ದಿರುವ ಘಟನೆ ಶುಕ್ರವಾರ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.
ಬೋರ್ ವೆಲ್ ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯೂರ್ (6) ಎಂದು ಗುರುತಿಸಲಾಗಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ಜರುಗಿದೆ.
ಇತ್ತ ಬಾಲಕ ಬೋರ್ ವೆಲ್ ಗೆ ಬೀಳುತ್ತಿದ್ದಂತೆ ಜೊತೆಗಿದ್ದ ಮಕ್ಕಳು ಮನೆಗೆ ಓಡಿ ಬಂದು ಪೋಷಕರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಮನೆಯವರು ಹಾಗೂ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ. ಇನ್ನೊಂದೆಡೆ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ ಡಿಆರ್ ಎಫ್) ತಂಡ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬಾಲಕನಿಗೆ ಉಸಿರಾಡಲು ಯಾವುದೇ ತೊಂದರೆಯಾಗದಂತೆ ಬೋರ್ ವೆಲ್ ನೊಳಗೆ ಆಮ್ಲಜನಕವನ್ನು ಪೂರೈಸಲಾಗುತ್ತಿದೆ.
ಮಗು ಬಿದ್ದಿರುವ ಬೋರ್ ವೆಲ್ ಗೆ ಸಮಾನಾಂತರವಾಗಿ ಜೆಸಿಬಿ ಮೂಲಕ ಮತ್ತೊಂದು ಬೋರ್‌ವೆಲ್ ಕೊರೆದು ರಕ್ಷಿಸಲು ರಕ್ಷಣಾ ತಂಡ ಮುಂದಾಗಿದೆ. ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಮಗುವನ್ನು ಸುರಕ್ಷಿತವಾಗಿ ಹೊರತರಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ. ಎಸ್ ಡಿಆರ್ ಎಫ್, ಪೊಲೀಸ್ ಮತ್ತು ಜಿಲ್ಲಾಡಳಿತ ಒಟ್ಟಾಗಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಕೆಲಸ ಮಾಡುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.