ಮನೆ ರಾಜ್ಯ ಕನ್ನಡಿಗರ ಸಂಪತ್ತನ್ನು ಲೂಟಿ ಮಾಡಿ ಹೊರ ರಾಜ್ಯಗಳಿಗೆ ಕಳುಹಿಸುತ್ತಿದ್ದಾರೆ: ಎಚ್‌ ಡಿ ದೇವೇಗೌಡ

ಕನ್ನಡಿಗರ ಸಂಪತ್ತನ್ನು ಲೂಟಿ ಮಾಡಿ ಹೊರ ರಾಜ್ಯಗಳಿಗೆ ಕಳುಹಿಸುತ್ತಿದ್ದಾರೆ: ಎಚ್‌ ಡಿ ದೇವೇಗೌಡ

0

ಮೈಸೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಸಂಪತ್ತನ್ನು ಲೂಟಿ ಮಾಡಿ ಹೊರ ರಾಜ್ಯಗಳಿಗೆ ಕಳುಹಿಸಿ ಬಿಜೆಪಿಯನ್ನು ಸೋಲಿಸುವ ಪ್ರಯತ್ನ ನಡೆಸುತ್ತಿದೆ. ಆದರೆ, ಕಾಂಗ್ರೆಸ್‌ ನ ಈ ಪ್ರಯತ್ನ ಫಲಿಸುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ ಡಿ ದೇವೇಗೌಡ ಅವರು ಭಾನುವಾರ ಹೇಳಿದರು.

Join Our Whatsapp Group

ಮೈಸೂರಿನಲ್ಲಿ ಭಾನುವಾರ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ದೇವೇಗೌಡ ಅವರು ಅಬ್ಬರದ ಪ್ರಚಾರ ನಡೆಸಿ, ಎನ್‌ ಡಿಎ ಅಭ್ಯರ್ಥಿಗಳ ಪರ ಮತ ಯಾಚಿಸಿದರು.

ಈ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಸಂಪತ್ತನ್ನು ಲೂಟಿ ಹೊರ ರಾಜ್ಯಗಳಿಗೆ ಕಳುಹಿಸಿ ದೇಶದಲ್ಲಿ ಬಿಜೆಪಿಯನ್ನು ಸೋಲಿಸುವ ಪ್ರಯತ್ನ ನಡೆಸುತ್ತಿದೆ. ಆದರೆ, ಕಾಂಗ್ರೆಸ್‌ ನ ಈ ಪ್ರಯತ್ನ ಫಲಿಸುವುದಿಲ್ಲ. ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಯ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ನನ್ನ 64 ವರ್ಷ ರಾಜಕೀಯ ಜೀವನದಲ್ಲಿ ಇಂತಹ ಲೂಟಿ ಮಾಡುವ ಸರ್ಕಾರವನ್ನು ನೋಡಿಲ್ಲ. ರಾಜ್ಯದ ಸಂಪತ್ತು ಕಾಂಗ್ರೆಸ್ ದೋಚುತ್ತಿದೆ. ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‌ ಗಢಕ್ಕೆ ರಾಜ್ಯದ ಜನರ ಸಂಪತ್ತನ್ನು ಲೂಟಿ ಮಾಡಿ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ಎರಡು ಮಹಾನುಭವರು (ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್) ರಾಜ್ಯವನ್ನು ಆಳುತ್ತಿದ್ದಾರೆ. ಆ ಪುಣ್ಯತ್ಮರಿಗೆ ನಮೋ ನಮಃ. ನರೇಂದ್ರ ಮೋದಿ ಅವರ ಬಗ್ಗೆ ಒಬ್ಬ ರಾಜ್ಯದ ಮುಖ್ಯಮಂತ್ರಿ(ಸಿದ್ದರಾಮಯ್ಯ), ಕೇವಲ 6 ಕೋಟಿ ಜನತೆಯ ಮುಖ್ಯಮಂತ್ರಿ 150 ಕೋಟಿ ಜನತೆಯ ಪ್ರಧಾನಿ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೆಸರು ಪ್ರಸ್ತಾಪಿಸದೆ ತೀವ್ರ ವಾಗ್ದಾಳಿ ನಡೆಸಿದರು.

ನಮಗೆ ಕೇವಲ ಮೂರು ಸೀಟು ಮುಖ್ಯವಲ್ಲ. ನಮಗೆ 28 ಕ್ಷೇತ್ರಗಳೂ ಮುಖ್ಯ. ಎಲ್ಲ ಕಡೆಗಳಲ್ಲೂ ಪ್ರಚಾರಕ್ಕೆ ಬರುತ್ತೇನೆ, ನೀವು ಕರೆದ ಕಡೆಗೆ ಬರುತ್ತೇನೆ. ನಾವು ಕನಿಷ್ಠ 24 ಕ್ಷೇತ್ರಗಳಲ್ಲಾದರೂ ಗೆಲುವು ಸಾಧಿಸಬೇಕು. ದೇಶವನ್ನು ಉಳಿಸಲು ಎನ್‌ಡಿಎ ಮೈತ್ರಿಕೂಟ 400 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು. ಇದಕ್ಕೆ ರಾಜ್ಯದಿಂದ ಕೊಡುಗೆ ನೀಡಬೇಕು ಎಂದರು.

ಬಳಿಕ ತಮ್ಮ ಪುತ್ರ ಕುಮಾರಸ್ವಾಮಯವರು ಪಂಚರತ್ನ ಕಾರ್ಯಕ್ರಮಗಳನ್ನು ಸ್ಮರಿಸಿದರು. ನನ್ನ ತಲೆಯಲ್ಲಿ ಬುದ್ಧಿ ಇಲ್ಲದೆ ಎನ್‌ಡಿಎ ಮೈತ್ರಿಕೂಟದೊಂದಿಗೆ ಹೋಗು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಗೆ ನಾನು ಹೇಳಿಲ್ಲ. ಈ ರಾಜ್ಯವನ್ನು ಕಾಂಗ್ರೆಸ್ ಲೂಟಿ ಮಾಡುತ್ತಿರುವುದನ್ನು ತಪ್ಪಿಸಲು ನೀನು ಮೋದಿ ಅವರೊಂದಿಗೆ ಹೋಗು ಎಂದು ನಾನೇ ಕುಮಾರಸ್ವಾಮಿ ಅವರನ್ನು ಕಳುಹಿಸಿಕೊಟ್ಟೆ ಎಂದು ಹೇಳಿದರು.