ಮನೆ ರಾಜ್ಯ ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ: ಇಲ್ಲಿದೆ ಮಾಹಿತಿ

ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ: ಇಲ್ಲಿದೆ ಮಾಹಿತಿ

0

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಸೋಮವಾರ ಬೆಳಗ್ಗಿನಿಂದಲೇ ಆರಂಭವಾಗಿದೆ.

Join Our Whatsapp Group

ಇಂದಿನಿಂದ ಏಪ್ರಿಲ್ 23 ರ ವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. 13 ಬಾರಿ ಕರಗ ಹೊತ್ತಿರುವ ಪೂಜಾರಿ ಎ. ಜ್ಞಾನೇಂದ್ರ ಈ ಬಾರಿಯೂ ಕರಗ ಹೊರಲಿದ್ದಾರೆ.

ಕರಗ ಕಾರ್ಯಕ್ರಮ ವೇಳಾಪಟ್ಟಿ

ರಾತ್ರಿ 10ಕ್ಕೆ ರಥೋತ್ಸವ ಧ್ವಜಾರೋಹಣ

ಏಪ್ರಿಲ್ 16 ರಿಂದ 19 ಪ್ರತಿ ದಿನ ವಿಶೇಷ ಪೂಜೆ ಮತ್ತು ಮಂಗಳಾರತಿ

ಏಪ್ರಿಲ್ 21ಕ್ಕೆ ಹಸಿ ಕರಗ ಆಯೋಜನೆ

ಏಪ್ರಿಲ್ 23 ರಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯ ರಥೋತ್ಸವ

ಏಪ್ರಿಲ್ 24ರಂದು ದೇವಸ್ಥಾನದಲ್ಲಿ ಗಾವು ಪೂಜೆ

25ಕ್ಕೆ ಕೊನೆಯ ದಿನದ ವಸಂತೋತ್ಸವ ಧ್ವಜಾರೋಹಣ

ಈ ವರ್ಷ ಸುಮಾರು 3000 ವೀರ ಕುಮಾರರು ಕರಗದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಸಂಪಂಗಿ ಕೆರೆ ಅಂಗಳದಲ್ಲಿ ಏಪ್ರಿಲ್ 21ರಂದು ಹಸಿ ಕರಗ ನಡೆಯಲಿದೆ.