ಮನೆ ರಾಜ್ಯ ಈಶ್ವರಪ್ಪ ಅವರು ನಾಮಪತ್ರ ವಾಪಸ್ ಪಡೆಯದಿದ್ದರೆ ಶಿಸ್ತು ಕ್ರಮ: ಬಿ ವೈ ವಿಜಯೇಂದ್ರ

ಈಶ್ವರಪ್ಪ ಅವರು ನಾಮಪತ್ರ ವಾಪಸ್ ಪಡೆಯದಿದ್ದರೆ ಶಿಸ್ತು ಕ್ರಮ: ಬಿ ವೈ ವಿಜಯೇಂದ್ರ

0

ಶಿವಮೊಗ್ಗ : ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ತಮ್ಮ ಪುತ್ರ ಕೆಇ ಕಾಂತೇಶ್‌ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು, ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

Join Our Whatsapp Group

ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಪಣತೊಟ್ಟಿರುವ ಈಶ್ವರಪ್ಪ ಕಳೆದ ವಾರ ತಮ್ಮ ನಾಮಪತ್ರವನ್ನೂ ಸಲ್ಲಿಸಿದ್ದರು. ಈ ಸಂಬಂಧ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಈಶ್ವರಪ್ಪ ಅವರು ನಾಮಪತ್ರ ವಾಪಸ್ ಪಡೆಯದಿದ್ದರೆ ಪಕ್ಷ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದರು.