ಮನೆ ಸ್ಥಳೀಯ ಮೈಸೂರು: ಮತದಾನ ಜಾಗೃತಿಗೆ ನಮ್ಮ ನಡೆ, ಮತಗಟ್ಟೆಯ ಕಡೆ

ಮೈಸೂರು: ಮತದಾನ ಜಾಗೃತಿಗೆ ನಮ್ಮ ನಡೆ, ಮತಗಟ್ಟೆಯ ಕಡೆ

0

ಮೈಸೂರು: ಮತದಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಮ್ಮ ನಡೆ ಮತಟ್ಟೆಯ ಕಡೆ ಜಾಗೃತಿ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಶೇಷವಾಗಿ ಹಮ್ಮಿಕೊಳ್ಳುವಂತೆ ಪಿರಿಯಾಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಬಿ.ಸುನೀಲ್ ಕುಮಾರ್ ಹೇಳಿದರು.

Join Our Whatsapp Group

ಪಿರಿಯಾಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ “ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ” ವಿಷಯ ಕುರಿತ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಚುನಾವಣಾ ಆಯೋಗವು ಏಪ್ರೀಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮತದಾರರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವಂತೆ ತಿಳಿಸಿದ್ದು, ಅದರಂತೆ ತಾಲ್ಲೂಕಿನ 34 ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಓಗಳಿಗೆ ಕ್ರಮಕೈಗೊಳ್ಳುವಂತೆ ಸಲಹೆ ನೀಡಿದರು.

ಮತಗಟ್ಟೆಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳು ಇರುವುದನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ ಗ್ರಾಮಪಂಚಾಯಿತಿ ಮಟ್ಟದಲ್ಲಿ ಪಿಡಿಓಗಳ ನೇತೃತ್ವದಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ನಮ್ಮ ನಡೆ, ಮತಗಟ್ಟೆಯ ಕಡೆ ಕಾರ್ಯಕ್ರಮವನ್ನು ಏಪ್ರೀಲ್ 21 ರಂದು ಎಲ್ಲಾ ಮತಗಟ್ಟೆಗಳಲ್ಲಿ ರಾಷ್ಟ್ರೀಯ ಹಬ್ಬ ಮಾದರಿಯಲ್ಲಿ ಹಮ್ಮಿಕೊಳ್ಳುವಂತೆ ತಿಳಿಸಿದರು.

ಏಪ್ರೀಲ್ 26 ಮತದಾನ ದಿನದಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಗಂಟೆಗೊಮ್ಮೆ ಮತದಾನ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸುವಂತೆ ಮಾಡುವಂತೆ ತಿಳಿಸಿದರು.

ಬಿಎಲ್ಓಗಳು ತಮ್ಮ ಹಂತದಲ್ಲಿ ಪ್ರತಿ ಮನೆ,ಮನೆಗೂ ಭೇಟಿ ನೀಡಿ ಮತದಾನದ ಮಾಹಿತಿಯನ್ನು ನೀಡುವುದರ ಜೊತೆಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಮತದಾನ ಜಾಗೃತಿ ಪೋಸ್ಟರ್ ಗಳನ್ನು ಬಿಡುಗಡೆಗೊಳಿಸಲಾಯಿತು ಬಳಿಕ ತಾಲ್ಲೂಕು ಪಂಚಾಯಿತಿ ಆವರಣದಿಂದ ಬಸ್ ನಿಲ್ದಾಣದವರೆಗೆ ಪಿಡಿಓಗಳು,ಬಿಎಲ್ಓಗಳ ಸಮ್ಮುಖದಲ್ಲಿ ಜಾಥ ನಡೆಸುವ ಮೂಲಕ ಸಾರ್ವಜನಿಕರಿಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.

ಸಭೆಯಲ್ಲಿ ಟಿಪಿಓ ವಸಂತಲಕ್ಷ್ಮೀ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಜಿ.ಸಿ.ಮಹದೇವ್,ಪುರಸಭೆ ಹೆಲ್ತ್ ಇನ್ಸ್ಪೆಕ್ಟರ್ ಮೋಹನ್ ಹಾಗೂ 34 ಗ್ರಾಮಪಂಚಾಯಿತಿ ಪಿಡಿಓಗಳು ಹಾಗೂ ಬಿಎಲ್ಓಗಳು ಭಾಗವಹಿಸಿದ್ದರು.