ಮನೆ ರಾಜ್ಯ ಏಪ್ರಿಲ್ 20 ರಂದು ಬೆಂಗಳೂರು, ಚಿಕ್ಕಬಳ್ಳಾಪುರ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ

ಏಪ್ರಿಲ್ 20 ರಂದು ಬೆಂಗಳೂರು, ಚಿಕ್ಕಬಳ್ಳಾಪುರ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ

0

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತೀವ್ರಗೊಳಿಸಿರುವ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಈಗಾಗಲೇ ಹಲವು ಮೈತ್ರಿ ಸಮಾವೇಶ ನಡೆಸಿ ಒಗ್ಗಟ್ಟು ಪ್ರದರ್ಶನ ನಡೆಸಿದ್ದಾರೆ.

Join Our Whatsapp Group

ಇದೀಗ ಮತ್ತೆ ಪ್ರಧಾನಿ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಏಪ್ರಿಲ್ 20ರಂದು ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

ಒಂದೇ ದಿನ ರಾಜ್ಯದಲ್ಲಿ ಎರಡು ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ, ಪಕ್ಷದ ಅಭ್ಯರ್ಥಿ ಡಾ. ಕೆ ಸುಧಾಕರ್ ಪರ ಮತ ಯಾಚನೆ ಮಾಡಲಿದ್ದಾರೆ.

ಬಳಿಕ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.

ಭಾನುವಾರ ಮೈಸೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ಜೆಡಿಎಸ್ ಬಿಜೆಪಿ ಮೈತ್ರಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಮತಯಾಚನೆ ಮಾಡಿದ್ದರು. ಅಲ್ಲದೆ, ಚಾಮರಾಜನಗರ ಸೇರಿದಂತೆ ಇತರ ಕ್ಷೇತ್ರಗಳ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ದರು.

ಬಳಿಕ ಮಂಗಳೂರಿಗೆ ತೆರಳಿದ್ದ ಮೋದಿ, ಪಕ್ಷದ ದಕ್ಷಿಣ ಕನ್ನಡ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಜೊತೆ ರೋಡ್ ಶೋ ನಡೆಸಿದ್ದರು.