ಮನೆ ರಾಷ್ಟ್ರೀಯ ಅಯೋಧ್ಯೆ ರಾಮಮಂದಿರದ ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ

ಅಯೋಧ್ಯೆ ರಾಮಮಂದಿರದ ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ

0

ಅಯೋಧ್ಯೆ: ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾನ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದೆ.

Join Our Whatsapp Group

ಇದೀಗ ರಾಮ ಮಂದಿರ ನಿರ್ಮಾಣವಾದ ನಂತರ ಮೊದಲ ರಾಮ ನವಮಿಯನ್ನು ಆಚರಣೆ ಮಾಡಲಾಗಿದೆ. ಈ ಸಮಯದಲ್ಲಿ ಬಾಲ ರಾಮನ ಮೇಲೆ ಸೂರ್ಯರಶ್ಮಿಯ ಸ್ಪರ್ಶವಾಗಿದೆ. ಕನ್ನಡಿಗಳು ಮತ್ತು ಮಸೂರಗಳನ್ನು ಒಳಗೊಂಡಿರುವ ಒಂದು ದೀರ್ಘವಧಿಯ ಕಾರ್ಯವಿಧಾನವಾಗಿದೆ. ಸೂರ್ಯರಶ್ಮಿ ನೇರವಾಗಿ ರಾಮ ಹಣೆಗೆ ಬೀಳುವಂತೆ ಮಾಡಲು ಈ ಹಿಂದೆ ವಿಜ್ಞಾನಿಗಳು ಒಂದು ಪ್ರಯೋಗವನ್ನು ಕೂಡ ನಡೆಸಿದರು. ಇದೀಗ ಈ ವಿಧಾನ ಯಶಸ್ವಿಯಾಗಿದೆ.

ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ರಾಮನ ವಿಗ್ರಹವನ್ನು ಪ್ರಾಣ ಪ್ರತಿಷ್ಠೆಯನ್ನು ಮಾಡಲಾಗಿತ್ತು.

ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR)-ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ (CBRI), ರೂರ್ಕಿಯ ಹಿರಿಯ ವಿಜ್ಞಾನಿಗಳ ಪ್ರಕಾರ, ಯೋಜಿತ ಈ ಸೂರ್ಯರಶ್ಮಿಯು 58 ಮಿ.ಮೀ. ಗಾತ್ರವನ್ನು ಹೊಂದಿದ್ದು, ರಾಮ ಲಲ್ಲಾನ ಹಣೆಯ ಮೇಲೆ ತಿಲಕದಂತೆ ಪ್ರಜ್ವಲಿಸಲಿದೆ. ಇದು ಸುಮಾರು ಮೂರರಿಂದ ಮೂರೂವರೆ ನಿಮಿಷಗಳು ಮೂಡಲಿದೆ. ಎರಡು ನಿಮಿಷಗಳ ಪೂರ್ಣ ಪ್ರಕಾಶ ರಾಮನ ಮೇಲೆ ಬೀಳಲಿದೆ ಎಂದು ಹೇಳಿದರು.

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಅನಿಲ್ ಮಿಶ್ರಾ ಈ ಹಿಂದೆ ಹೇಳಿರುವಂತೆ ಸೂರ್ಯರಶ್ಮಿ ರಾಮನನ್ನು ಸ್ಪರ್ಶ ಮಾಡುವ ಸಮಯದಲ್ಲಿ ರಾಮ ಭಕ್ತರಿಗೆ ಮಂದಿರದೊಳಗೆ ಅವಕಾಶ ನೀಡಲಾಗುವುದು. ದೇವಾಲಯದ ಟ್ರಸ್ಟ್‌ನಿಂದ ಸುಮಾರು 100 ಎಲ್‌ಇಡಿ ಸ್ಕ್ರೀನ್‌ಗಳನ್ನು ಹಾಕಲಾಗುತ್ತಿದೆ ಮತ್ತು ಸರ್ಕಾರದಿಂದ 50 ರಾಮನವಮಿ ಆಚರಣೆ ಲೈವ್​​​​ ಸ್ಕ್ರೀನ್​​ ನೋಡಲಾಗುವುದು ಎಂದು ಹೇಳಿದ್ದಾರೆ.