ಬೆಂಗಳೂರು: ಬೆಂಗಳೂರಿನಲ್ಲಿ ರಾಮನವಮಿ ಮುಗಿಸಿ ತೆರಳುತ್ತಿದ್ದ ಯುವಕರು ‘ಜೈ ಶ್ರೀರಾಮ್’ ಎಂದಿದ್ದಕ್ಕೆ ಯುವಕರ ಗುಂಪೊಂದು ಅಡ್ಡಗಟ್ಟಿ ಹಲ್ಲೆ ನಡೆಸಲು ಮುಂದಾಗಿರುವ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ, ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಉದ್ಘಾಟನೆ ಮಾಡಿ ಹೋದ ರಾಹುಲ್ ಗಾಂಧಿ ಎಂದು ಟೀಕಿಸಿದೆ.
‘ಸರ್ವಜನಾಂಗದ ಶಾಂತಿಯ ತೋಟ ಕರ್ನಾಟಕದಲ್ಲಿ “ದ್ವೇಷದ ಮಾರುಕಟ್ಟೆ” ಉದ್ಘಾಟನೆ ಮಾಡಿ ಹೋಗಿದ್ದ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬರುತ್ತಿದ್ದಂತೆ ಹಿಂದೂ ಯುವಕರ ಮೇಲೆ ಹಲ್ಲೆ ಆಗಿದೆ. ರಾಮ ನವಮಿ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ಮತಾಂಧ ಪುಂಡರು ಅವಾಚ್ಯ ಪದಗಳಿಂದ ನಿಂದಿಸಿ ಓಡಿ ಹೋಗಿದ್ದಾರೆ. ಕಾನೂನು ಸುವ್ಯವಸ್ಥೆಯನ್ನು ಮತಾಂಧ ಶಕ್ತಿಗಳ ಕೈಗೆ ಕೊಟ್ಟು ಸುಳ್ಳು ಸುದ್ದಿ ಹರಡುವುದರಲ್ಲಿ ನಿರತವಾಗಿದೆ’ ಎಂದು ಬಿಜೆಪಿ ಕಿಡಿ ಕಾರಿದೆ.
ರಾಹುಲ್ ಗಾಂಧಿ ಬುಧವಾರ ರಾಜ್ಯಕ್ಕೆ ಆಗಮಿಸಿ ಮಂಡ್ಯ ಮತ್ತು ಕೋಲಾರದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿ ವಾಪಸಾಗಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.