ಮನೆ ರಾಷ್ಟ್ರೀಯ ಬೌದ್ಧ ಸಂಸ್ಕೃತಿ, ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಮೋದಿ ಶಂಕು ಸ್ಥಾಪನೆ: ನೇಪಾಳದೊಂದಿಗೆ 6 ಒಪ್ಪಂದಕ್ಕೆ ಸಹಿ

ಬೌದ್ಧ ಸಂಸ್ಕೃತಿ, ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಮೋದಿ ಶಂಕು ಸ್ಥಾಪನೆ: ನೇಪಾಳದೊಂದಿಗೆ 6 ಒಪ್ಪಂದಕ್ಕೆ ಸಹಿ

0

ಲುಂಬಿನಿ (ನೇಪಾಳ) Lumbini (Nepal)- ನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಇಂದು ಭೇಟಿ ನೀಡಿದ್ದು, ಈ ವೇಳೆ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದ್ದಾರೆ.

ಹಲಿ ಅಂತಾರಾಷ್ಟ್ರೀಯ ಬೌದ್ಧ ಒಕ್ಕೂಟಕ್ಕೆ (ಐಬಿಸಿ) ಸೇರಿದ ಜಾಗದಲ್ಲಿ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, ಈ ವೇಳೆ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ (Sher Bahadur Deuba) ಇದ್ದರು.

ಇದಕ್ಕೂ ಮುನ್ನ, ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಹಾಗೂ ಅವರ ಪತ್ನಿ ಡಾ. ಅರ್ಜು ರಾಣಾ ದೇವುಬಾ ಅವರು ಮಾಯಾ ದೇವಿ ದೇವಾಲಯದ ಆವರಣದಲ್ಲಿರುವ ಬುದ್ಧದನ ಜನ್ಮದ ಗುರುತು ಕಲ್ಲಿಗೆ ಗೌರವ ಸಲ್ಲಿಸಿದರು.

ಈ ನಡುವೆ, ಉಭಯ ನಾಯಕರು ದೇವಾಲಯದ ಪಕ್ಕದಲ್ಲಿರುವ ಅಶೋಕ ಸ್ತಂಭದ ಬಳಿಯ ದೀಪಗಳನ್ನು ಬೆಳಗಿಸಿದರು. ಕ್ರಿಸ್ತಪೂರ್ವ 249 ರಲ್ಲಿ ಚಕ್ರವರ್ತಿ ಅಶೋಕನಿಂದ ಈ ಸ್ತಂಭವು ಸ್ಥಾಪಿಸಲ್ಪಟ್ಟಿದೆ. ಲುಂಬಿನಿಯು ಭಗವಾನ್ ಬುದ್ಧನ ಜನ್ಮಸ್ಥಳವಾಗಿದೆ ಎಂಬುದನ್ನು ಹೇಳುವ ಮೊದಲ ಶಿಲಾಶಾಸನವನ್ನು ಈ ಸ್ತಂಭ ಹೊಂದಿದೆ.

ಇದೇ ವೇಳೆ, 2014ರಲ್ಲಿ ಮೋದಿ ಲುಂಬಿನಿ ವನಕ್ಕೆ ಕೊಡುಗೆಯಾಗಿ ನೀಡಿದ್ದ ಬೋಧಿ ವೃಕ್ಷದ ಸಸಿಗೆ ಉಭಯ ನಾಯಕರು ನೀರೆರೆದರು. ಈ ಕುರಿತಂತೆ ಚಿತ್ರ ಸಹಿತ ಪ್ರಧಾನಿ ಸಚಿವಾಲಯವು ಟ್ವೀಟ್ ಮಾಡಿದೆ.

2014ರಿಂದ ನೇಪಾಳಕ್ಕೆ ಪ್ರಧಾನಿಯವರ ಐದನೇ ಭೇಟಿ ಇದಾಗಿದೆ. ಉತ್ತರ ಪ್ರದೇಶದ ಕುಶಿನಗರದಿಂದ ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್‌ನಲ್ಲಿ ಮೋದಿ ಇಲ್ಲಿಗೆ ಆಗಮಿಸಿದರು.

ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿ ಉಭಯ ದೇಶಗಳ ನಾಯಕರು ಸಾಂಸ್ಕೃತಿಕ ಮತ್ತು ಶೈಕ್ಷಣಿಕ ವಲಯಗಳಲ್ಲಿ ಸಹಕಾರಕ್ಕಾಗಿ ಆರು ಒಪ್ಪಂದಗಳಿಗೆ(ಎಂಒಯು) ಸಹಿ ಹಾಕಿದ್ದಾರೆ.

ನೇಪಾಳದೊಂದಿಗಿನ ಭಾರತದ ಬಾಂಧವ್ಯ ಅನನ್ಯ. ತಮ್ಮ ನೇಪಾಳ ಭೇಟಿಯು ಪರಸ್ಪರ ಸಂಬಂಧಗಳನ್ನು ಮತ್ತಷ್ಟ ಗಾಢವಾಗಿಸುವ ಗುರಿಯನ್ನು ಹೊಂದಿದೆ. ನೇಪಾಳದೊಂದಿಗಿನ ನಮ್ಮ ಸಂಬಂಧ ಅನನ್ಯವಾಗಿದೆ. ಭಾರತ ಮತ್ತು ನೇಪಾಳದ ನಡುವಿನ ನಾಗರಿಕತೆ ಮತ್ತು ನಮ್ಮ ನಿಕಟ ಸಂಬಂಧಗಳ ಬಲವಾದ ಅಡಿಪಾಯವಾಗಿದೆ. ಶತ ಶತಮಾನಗಳಿಂದಲೂ ಕಾಲದ ಪರೀಕ್ಷೆಯಲ್ಲಿ ನಿಂತಿರುವ ಈ ಬಂಧಗಳನ್ನು ಆಚರಿಸುವುದು ಮತ್ತು ಗಾಢವಾಗಿಸುವುದು ನನ್ನ ಭೇಟಿಯ ಉದ್ದೇಶವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತದೊಂದಿಗೆ ಬಾಂಧವ್ಯ ಗಟ್ಟಿಗೊಳಿಸುವುದನ್ನು ನಾವು ಎದುರುನೋಡುತ್ತಿದ್ದೇವೆ. ಭಾರತ ಹಾಗೂ ನೇಪಾಳ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳಲ್ಲಿ ಪರಸ್ಪರ ಸಂಬಂಧ ಹೊಂದಿವೆ ಎಂದು ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ದೇವುಬಾ ಅವರೊಂದಿಗೆ ಲುಂಬಿನಿಯಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಉಭಯ ದೇಶಗಳ ಸಹಕಾರವನ್ನು ಬಲಪಡಿಸಲು ಮತ್ತು ನಮ್ಮ ಬಹುಮುಖಿ ಪಾಲುದಾರಿಕೆಯಲ್ಲಿ ಹೊಸ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಅವಕಾಶವಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಟ್ವೀಟ್ ಮಾಡಿದ್ದಾರೆ.