ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎನ್ನಲಾಗಿದೆ.
ಯಾದವ್ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದೆ ಪರಿಣಾಮ ಯಾದವ್ ರಸ್ತೆಗೆ ಬಿದ್ದಿದ್ದಾರೆ ಈ ವೇಳೆ ಅದೇ ಮಾರ್ಗದಲ್ಲಿ ಬಂದ ಟ್ಯಾಂಕರ್ ಅವರ ಮೇಲೆ ಹರಿದು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














