ಮನೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲು

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲು

0

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಭರ್ಜರಿ ಮತ ಬೇಟೆ ಆರಂಭಿಸಿದ್ದಾರೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Join Our Whatsapp Group

ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಧರ್ಮ , ಭಾಷೆ ಜಾತಿ , ಸೌಹಾರ್ದ್ಯತೆ ವಿಚಾರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆ ಬಿ ವೈ ವಿಜಯೇಂದ್ರ ಹಾಗೂ ಬಿಜೆಪಿ for Karnataka ಖಾತೆ ಮೇಲೆ ಎಫ್​ಐಆರ್​ ದಾಖಲಾಗಿದೆ.

ಶಿಕಾರಿಪುರ ವಿಧಾನಸಭಾಕ್ಷೇತ್ರದ ಶಾಸಕರು ಆಗಿರುವ ವಿಜಯೇಂದ್ರ ಹಾಗೂ ಬಿಜೆಪಿ ಎಕ್ಸ್ ಖಾತೆ ಉಸ್ತುವಾರಿ ವಹಿಸಿಕೊಂಡಿರುವವರ ವಿರುದ್ಧ ಗಾಂಧಿನಗರದ ಚುನಾವಣಾ ನೊಡೆಲ್ ಅಧಿಕಾರಿ ಅರ್ಜುನ್ ಆಯೂರ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.