ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಇಂದಿನ ಕಲಾಪದ ಅವಧಿಯಲ್ಲಿ ವಿವಿಧ ಪ್ರಕಾರಗಳ 608 ಅರ್ಜಿಗಳನ್ನು ಇಂದೇ ವಿಲೇವಾರಿ ಮಾಡುವ ಮೂಲಕ ಹೈಕೋರ್ಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಹೈಕೋರ್ಟ್ ನ ಬೆಂಗಳೂರು ಪೀಠದ ಕೋರ್ಟ್ ಹಾಲ್ ಸಂಖ್ಯೆ 23ರಲ್ಲಿ ಕುಳಿತಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಪ್ರಕರಣದ ಪಟ್ಟಿಯಲ್ಲಿ (ಕಾಸ್ ಲಿಸ್ಟ್) ನಮೂದಾಗಿದ್ದ ಎಲ್ಲಾ 608 ಅರ್ಜಿಗಳನ್ನೂ ದಿನದ ಕಲಾಪದ ಅವಧಿಯಲ್ಲಿ ವಿಲೇವಾರಿ ಮಾಡಿದರು.
ಇದರಲ್ಲಿ ಬೆಂಗಳೂರು ನೀರು ಪೂರೈಕೆ ಮತ್ತು ಒಳಚರಂಡಿ ಮಂಡಳಿ ಕಾಯಿದೆಯ ಸಿಂಧುತ್ವ ಪ್ರಶ್ನಿಸಿ ಒಟ್ಟಾರೆ 603 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇಷ್ಟು ಪ್ರಕರಣಗಳು ಒಂದನೇ ಪಟ್ಟಿಯಲ್ಲಿದ್ದರೆ, ಎರಡನೇ ಪಟ್ಟಿಯಲ್ಲಿ 183 ಅರ್ಜಿಗಳಿದ್ದವು. ಮೂರನೇ ಪಟ್ಟಿಯು ಕಾಯ್ದಿರಿಸಿದ್ದ ಅರ್ಜಿಗಳ ತೀರ್ಪಿಗೆ ಸಂಬಂಧಿಸಿದ್ದಾಗಿದ್ದವು.
ಹೈಕೋರ್ಟ್‌ನಲ್ಲಿ ಇತರೆ ನ್ಯಾಯಮೂರ್ತಿಗಳ ಅರ್ಜಿ ವಿಲೇವಾರಿ ಪ್ರಮಾಣ ವರ್ಷವೊಂದಕ್ಕೆ ಸರಾಸರಿ 750 ಅರ್ಜಿಗಳಷ್ಟಿದೆ ಎನ್ನಲಾಗಿದ್ದು, ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕಳೆದ 15 ವಾರಗಳಲ್ಲಿ 2 ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡಿದ ಹೆಗ್ಗಳಿಕೆ ಹೊಂದಿದ್ದಾರೆ.
2023ರ ಜೂನ್ 12ರ ವಿಚಾರಣೆಯಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಭರ್ತಿ 522 ಪ್ರಕರಣಗಳನ್ನು ವಿಚಾರಣೆ ನಡೆಸಿದ್ದರು. ಅದಕ್ಕೂ ಕೆಲವು ತಿಂಗಳ ಹಿಂದೆ ಇದೇ ನ್ಯಾಯಮೂರ್ತಿಗಳ ಮುಂದೆ 480ಕ್ಕೂ ಅಧಿಕ ಪ್ರಕರಣಗಳನ್ನು ಪಟ್ಟಿ ಮಾಡಲಾಗಿತ್ತು. ಬಹುತೇಕ ಎಲ್ಲಾ ಪ್ರಕರಣಗಳನ್ನು ಅಂದು ನ್ಯಾ. ನಾಗಪ್ರಸನ್ನ ಅವರು ವಿಚಾರಣೆ ನಡೆಸಿದ್ದರು.
ನಾಗಪ್ರಸನ್ನ ಅವರು 2019ರ ನವೆಂಬರ್ 26ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು 2021ರ ಸೆಪ್ಟಂಬರ್ 8ರಂದು ಕಾಯಂಗೊಂಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.