ಮನೆ ಸ್ಥಳೀಯ ಮತದಾನ ನಮ್ಮ ಆದ್ಯ ಕರ್ತವ್ಯ: ಇಒ ಧರಣೇಶ್

ಮತದಾನ ನಮ್ಮ ಆದ್ಯ ಕರ್ತವ್ಯ: ಇಒ ಧರಣೇಶ್

0

ಮೈಸೂರು: ಮತದಾನ ಮಾಡುವುದು ನಮ್ಮ ಆದ್ಯ ಕರ್ತವ್ಯ ಹಾಗಾಗಿ ಮತದಾನದ ದಿನ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು ಕರೆ ನೀಡಿದರು.

Join Our Whatsapp Group

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಹಿನ್ನೆಲೆ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮಂಗಳವಾರ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಆಟೋ ನಿಲ್ದಾಣದ ಆವರಣದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮತದಾನ ಮಾಡುವುದು ನಿಮ್ಮ ಹಕ್ಕು, ಇದೇ ಏಪ್ರಿಲ್ 26ರ ಶುಕ್ರವಾರ ಬೆಳಿಗ್ಗೆ 7 ರಿಂದ ಸಂಜೆ 6ರವರಗೆ ಮತದಾನ ಪ್ರಕ್ರಿಯೆಯ ನಡೆಯಲಿದ್ದು, ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಮತ ಚಲಾಯಿಸಿ ಶೇಕಡವಾರು ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೆ ನೈತಿಕ ಚುನಾವಣೆಯನ್ನು ಬೆಂಬಲಿಸುವ ಮೂಲಕ ನಿಮ್ಮ ಮತದ ಮೌಲ್ಯವನ್ನು ಹೆಚ್ಚಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ, ಹಾಗಾಗಿ ಯಾರೊಬ್ಬರು ಮತದಾನದಿಂದ ದೂರ ಉಳಿಯಬೇಡಿ ಎಂದು ಹೇಳಿದರು.

ಮಾಳದ ಹಾಡಿ ಯುವಕ ಯುವತಿಯರು ಆಕರ್ಷಕ ಕೋಲಾಟ ನೃತ್ಯ ಮಾಡಿ ಜನರನ್ನು ರಂಜಿಸಿದರು. ಬಳಿಕ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಿಗೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿ ಏಪ್ರಿಲ್ 26 ರಂದು ತಪ್ಪದೇ ಮತದಾನ ಮಾಡುವಂತೆ ಅರಿವು ಮೂಡಿಸಲಾಯಿತು.

ಈ ವೇಳೆ ಸಹಾಯಕ ನಿರ್ದೇಶಕರು (ಗ್ರಾ.ಉ) ರಘುನಾಥ್ ಕೆ.ಎಂ, ತಾಲ್ಲೂಕು ಯೋಜನಾಧಿಕಾರಿ ರಂಗಸ್ವಾಮಿ, ಪಿಡಿಒಗಳಾದ ರಮೇಶ್, ಪ್ರಭಾಕರ್, ಸುರೇಶ್, NRLM ಟಿಪಿಎಂ ಶ್ರೀಕಾಂತ್, ಐಇಸಿ ಸಂಯೋಜಕ ನಿಂಗರಾಜು, ಗ್ರಾ.ಪಂ ಸಿಬ್ಬಂದಿಗಳು ಹಾಗೂ ಸಂಜೀವಿನಿ NRLM ಸಿಬ್ಬಂದಿಗಳು ಹಾಗೂ ಗ್ರಾ.ಪಂ ಒಕ್ಕೂಟದ ಸದಸ್ಯರು ಇದ್ದರು.