ಬೆಂಗಳೂರು: ಹಾಸನ ಸಂಸದ, ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ.
ಕೆಲ ದಿನಗಳಿಂದ ಹರದಾಡುತ್ತಿರುವ ವಿಡಿಯೋದಿಂದ ಮುಜುಗರವಾಗಿದೆ. ಈ ವಿಡಿಯೋಗಳಲ್ಲಿ ಪ್ರಜ್ವಲ್ ರೇವಣ್ಣ ಕಾಣಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಪ್ರಜ್ವಲ್ ತಪ್ಪಿತಸ್ಥರು ಎಂಬ ಭಾವನೆ ಉಂಟಾಗಿದೆ. ದೇವೇಗೌಡರು, ಹೆಚ್ ಡಿ ಕುಮಾರಸ್ವಾಮಿ ಅವರು ಹೆಣ್ಣು ಮಕ್ಕಳಿಗೆ ಗೌರವ ನೀಡುತ್ತಾ ಬಂದಿದ್ದಾರೆ. ಹೆಚ್ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಲಾಟರಿ ನಿಷೇಧ ಮಾಡಿದ್ದರು. ಲಾಟರಿ ನಿಷೇಧಿಸಿ ಹೆಣ್ಣು ಮಕ್ಕಳ ಪುಣ್ಯಕ್ಕೆ ಪಾತ್ರರಾಗಿದ್ದಾರೆ. ಪಕ್ಷದ ಚಿಹ್ನೆಯಲ್ಲಿ ಭತ್ತದ ತೆನೆಹೊತ್ತ ಮಹಿಳೆಯ ಚಿತ್ರ ಇದೆ. ಭತ್ತದ ತೆನೆಹೊತ್ತ ಮಹಿಳೆಯ ಚಿತ್ರ ಹೆಣ್ಣಿನ ಗೌರವವನ್ನ ಪ್ರತಿಪಾದಿಸುತ್ತೆ. ಇಂತಹ ಪರಂಪರೆ ಹೊಂದಿರುವ ಪಕ್ಷಕ್ಕೆ ಮುಜುಗರ ತಂದಿರುವುದು ಸುಳ್ಳಲ್ಲ. ಹೀಗಾಗಿ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ರಚಿಸಿದೆ. ಪಕ್ಷ ಕೂಡ ಆಂತರಿಕ ಸಮಿತಿ ರಚನೆ ಮಾಡಿ ಸತ್ಯಾಸತ್ಯ ತಿಳಿಸಬೇಕು.ಈ ಪ್ರಕರಣದಿಂದ ಸದ್ಯ ಜೆಡಿಎಸ್ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಪಕ್ಷದ ಮುಜುಗರ ತಪ್ಪಿಸಲು ಪ್ರಜ್ವಲ್ರನ್ನ ಅಮಾನತುಗೊಳಿಸಬೇಕು ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಬಂಧನಕ್ಕೆ ಒತ್ತಾಯ
ಹಾಸನ ಜಿಲ್ಲೆಯ ಹಲವು ಮಹಿಳೆಯರ ಜೊತೆಗಿನ ಅಶ್ಲೀಲ ವೀಡಿಯೋ ಚಿತ್ರೀಕರಿಸಿದ ಪ್ರಭಾವಿ ವ್ಯಕ್ತಿಯನ್ನು ಬಂಧಿಸುವಂತೆ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಆಗ್ರಹಿಸಿದೆ. ಅಲ್ಲದೆ ಪೆನ್ಡ್ರೈವ್ ಮೂಲಕ ಮಹಿಳೆಯರ ಅಶ್ಲೀಲ ವೀಡಿಯೋ ಹಂಚಿ ಅವರ ಖಾಸಗಿ ಜೀವನಕ್ಕೆ ಧಕ್ಕೆ ತಂದವರ ವಿರುದ್ಧವೂ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳು, ಜನಪರ, ದಲಿತ, ಮಹಿಳಾ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಲಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.