ಶಿವಮೊಗ್ಗ: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಹಾಗೂ ತಮ್ಮ ಅಣ್ಣನ ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಆದರೆ, ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಅವರು ನೀಡಿಲ್ಲ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕುಮಾರಸ್ವಾಮಿ, ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲಿ ಎಂಬ ಅಭಿಪ್ರಾಯವನ್ನು ಪುನರುಚ್ಚರಿಸಿದ್ದಾರೆ.
ಕಾನೂನು ಎಲ್ಲರಿಗೂ ಸಮಾನವಾಗಿದೆ. ತನಿಖೆಗೆ ಸರ್ಕಾರ ಈಗಾಗಲೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಿಂದ ಸತ್ಯ ಹೊರಬರಲಿ. ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷೆ ಆಗಲಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೂ ಆದ ಕುಮಾರಸ್ವಾಮಿ ಹೇಳಿದ್ದಾರೆ.
ಪ್ರಜ್ವಲ್ ಎಲ್ಲಿ ಹೋಗುತ್ತಾರೆ, ಏನು ಮಾಡುತ್ತಾರೆ ಎಂದು ತನಗೆ ಹೇಗೆ ಗೊತ್ತು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಹಾಸನದಲ್ಲಿ ಚುನಾವಣೆಗೆ ಮೂರು ದಿನ ಮೊದಲು ಪೆನ್ ಡ್ರೈವ್ ಮೂಲಕ ಅಪಪ್ರಚಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
14ರಲ್ಲಿ ಎನ್ ಡಿಎಗೆ 13 ಸ್ಥಾನ
ಇದೆ ವೇಳೆ, ರಾಜ್ಯದಲ್ಲಿ ಶುಕ್ರವಾರ ಚುನಾವಣೆ ಆದ 14 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ 13 ಸ್ಥಾನಗಳು ಸಿಗಲಿವೆ ಎನ್ನುವ ವಿಶ್ವಾಸವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.