ಮನೆ ಹವಮಾನ ರಾಜ್ಯದಲ್ಲಿ ಹೆಚ್ಚಾಗಲಿರುವ ಉಷ್ಣ ಅಲೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಹೆಚ್ಚಾಗಲಿರುವ ಉಷ್ಣ ಅಲೆ: ಹವಾಮಾನ ಇಲಾಖೆ ಮುನ್ಸೂಚನೆ

0

ಬೆಂಗಳೂರು: ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಉಷ್ಣಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Our Whatsapp Group

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ,ವಿಜಯಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ಮುಂದಿನ ಐದು ದಿನಗಳವರೆಗೆ ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ವಾತಾವರಣವಿರಲಿದೆ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 43.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 38.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 42.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಾಮರಾಜನಗರದಲ್ಲಿ 40.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.