ನಾಸಿಕ್: ಮಹಾರಾಷ್ಟ್ರದ ನಾಸಿಕ್ ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಾಹಿತಿ ಪ್ರಕಾರ, ಬಸ್ ನಾಸಿಕ್ ನಿಂದ ಜಲಗಾಂವ್ಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದ ಬಗ್ಗೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳು ಹಾಗೂ ಮೃತರನ್ನು ಬಸ್ ನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.
ಅಪಘಾತದ ನಂತರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಉಂಟಾಗಿತ್ತು. ಮಾಹಿತಿ ಪ್ರಕಾರ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಈ ಘಟನೆಯಿಂದ ಬಸ್ ಒಂದು ಪಲ್ಟಿಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಅಪಘಾತಕ್ಕೆ ಟೈರ್ ಸ್ಫೋಟವೇ ಕಾರಣ ಎನ್ನಲಾಗಿದೆ. ಇದರಿಂದ ಚಾಲಕನಿಗೆ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ಗಾಯಗೊಂಡಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.