ಮನೆ ರಾಜ್ಯ ಲೈಂಗಿಕ ದೌರ್ಜನ್ಯ ಪ್ರಕರಣ: ಮೇ 3 ರಂದು ಜರ್ಮನಿಯಿಂದ ಪ್ರಜ್ವಲ್​ ರೇವಣ್ಣ ರಾಜ್ಯಕ್ಕೆ ವಾಪಸ್​

ಲೈಂಗಿಕ ದೌರ್ಜನ್ಯ ಪ್ರಕರಣ: ಮೇ 3 ರಂದು ಜರ್ಮನಿಯಿಂದ ಪ್ರಜ್ವಲ್​ ರೇವಣ್ಣ ರಾಜ್ಯಕ್ಕೆ ವಾಪಸ್​

0

ಬೆಂಗಳೂರು: ಮಹಿಳೆಯರ ಮೇಲೆ ಲೈಗಿಂಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಸದ್ಯ ವಿದೇಶ ಪ್ರವಾಸದಲ್ಲಿದ್ದು, ಶುಕ್ರವಾರ (ಮೇ 03)ರ ಮಧ್ಯರಾತ್ರಿ ರಾಜ್ಯಕ್ಕೆ ಮರಳಲಿದ್ದಾರೆ.

Join Our Whatsapp Group

ಪ್ರಜ್ವಲ್​ ರೇವಣ್ಣ ಅವರು ಜರ್ಮಿನಿಯ ಫ್ರಾಂಕ್ ​ಫರ್ಟ್ ತೆರಳಿದ್ದು, ಬೆಂಗಳೂರಿಗೆ ರಿಟರ್ನ್​ ಟಿಕೆಟ್ ಬುಕ್​ ಮಾಡಿದ್ದಾರೆ. ಮೇ3 ರಂದು ಮಧ್ಯಾಹ್ನ 1.30ಕ್ಕೆ ವಿಮಾನ ಫ್ರಾಂಕ್​ಫರ್ಟ್​ನಿಂದ ಹೊರಡಲಿದ್ದು,​​ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮತ್ತು ಸಂಸದ ಪ್ರಜ್ವಲ್​ ರೇವಣ್ಣ ಅವರು ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ (SIT) ನೋಟಿಸ್​ ನೀಡಿದೆ. ವಿಶೇಷ ತನಿಖಾ ತಂಡ ವಿಡಿಯೋ ಪರಿಶೀಲನೆಗೆ ಪ್ರತ್ಯೇಕ ತಂಡ ರಚಿಸಿದೆ.  ಸಂತ್ರಸ್ತೆಯರ ವಿಚಾರಣೆಗೆ ಮಹಿಳಾ ಅಧಿಕಾರಿಗಳನ್ನು ನೇಮಕ ಮಾಡಿದೆ. ಪೊಲೀಸರು  ವೀಡಿಯೋದಲ್ಲಿರುವ ಐವರು ಮಹಿಳೆಯರಿಂದ ಮಾಹಿತಿ ಕಲೆ ಹಾಕಲು ಯತ್ನಿಸುತ್ತಿದೆ.