ಮನೆ ರಾಜ್ಯ ಏ.೮ ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ಏ.೮ ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

0

ಬೆಂಗಳೂರು: ೨೦೨೩-೨೪ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದೆ. ಮಾರ್ಚ್ ೨೫ ರಿಂದ ಏಪ್ರಿಲ್ ೬ ರವರೆಗೆ ರಾಜ್ಯಾದ್ಯಂತ ೨,೭೫೦ ಕೇಂದ್ರಗಳಲ್ಲಿ ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿದೆ. ೪.೪೧ ಲಕ್ಷ ಬಾಲಕರು, ೪.೨೮ ಲಕ್ಷ ಬಾಲಕಿಯರೂ ಸೇರಿದಂತೆ ಒಟ್ಟು ೮.೬೯ ಲಕ್ಷ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದರು.

Join Our Whatsapp Group

ಆಯಾ ವಿಷಯಗಳ ಪರೀಕ್ಷೆಗಳು ಮುಗಿದ ಮರುದಿನವೇ ಮೌಲ್ಯ ಮಾಪನ ಕಾರ್ಯ ಆರಂಭಿಸಲಾಗಿತ್ತು. ಎಲ್ಲ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ಅಂಕಗಳ ಕೂಡುವಿಕೆ ಕಾರ್ಯ ನಡೆಯುತ್ತಿದೆ. ಮೇ ೬ರ ಒಳಗೆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಮೇ ೭ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯಲಿರುವುದರಿಂದ ಮೇ ೮ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಲು ಮಂಡಳಿ ನಿರ್ಧರಿಸಿದೆ.

ಎಸ್ಸೆಸ್ಸೆಲ್ಸಿಗೆ ಮೊದಲ ಬಾರಿಗೆ ಈ ವರ್ಷ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದ್ದು, ಎರಡನೇ ಪರೀಕ್ಷೆಯು ಮೇ ಮೂರನೇ ವಾರದಲ್ಲಿ ಪ್ರಾರಂಭವಾಗಲಿದೆ. ಉತ್ತೀರ್ಣರಾದ ವಿದ್ಯಾರ್ಥಿಗಳು ಸಹ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಉಳಿದ ಎರಡು ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ಯಾವ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಬರುತ್ತವೆಯೋ ಅದರ ಅಂಕಪಟ್ಟಿ ಪಡೆಯಬಹುದು.