ಮನೆ ಅಪರಾಧ ಸಂಸದ ಪ್ರಜ್ವಲ್​​ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಸಂಸದ ಪ್ರಜ್ವಲ್​​ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

0

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಸಂಸದ ಪ್ರಜ್ವಲ್​​ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು ಎಸ್​ಐಟಿ ಅಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಆಧರಿಸಿ ಅಧಿಕಾರಿಗಳು ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿದ್ದ ಎಫ್​ಐಆರ್​ಗೆ ಹೊಸದಾಗಿ ಐಪಿಸಿ ಸೆಕ್ಷನ್​​ 376 ಅನ್ನು ಸೇರ್ಪಡೆಗೊಳಿಸುವ ಮೂಲಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜ್ವಲ್​ ರೇವಣ್ಣ ಹಲವು ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ. ಸಿಆರ್​​ ಪಿಸಿ 164 ಅಡಿಯಲ್ಲಿ ಹೇಳಿಕೆ ದಾಖಲಿಸಲಾಗಿದೆ. ಸಂತ್ರಸ್ತೆಯ ಮಾಹಿತಿಯನ್ನು ಗೌಪ್ಯವಾಗಿರಿಸಲಾಗಿದೆ.

2ನೇ ಎಫ್​ಐಆರ್​ನಲ್ಲಿ ದಾಖಲಿಸಿರುವ ಸೆಕ್ಷನ್ ​ಗಳು

ಐಪಿಸಿ 376(2) ಎನ್​, 506, 354 ಎ1,  354ಬಿ, 354ಸಿ ಹಾಗೂ ಐಟಿ ಕಾಯ್ದೆ ಅಡಿ ಎಫ್​ಐಆರ್​ ದಾಖಲಾಗಿದೆ.

376 (2) ಎನ್​ – ಒಬ್ಬ ಮಹಿಳೆ ಮೇಲೆ‌ ನಿರಂತರ ಅತ್ಯಾಚಾರ, ಕನಿಷ್ಟ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ 506 – ಅಪರಾಧಿಕ ಉದ್ದೇಶದಿಂದ ಬೆದರಿಸುವುದು. 354a1 – ಲೈಂಗಿಕ ಬೇಡಿಕೆಗೆ ಒತ್ತಾಯಿಸುವುದು. ಗರಿಷ್ಟ 3 ವರ್ಷಗಳ ಶಿಕ್ಷೆ. 354b – ಅಪರಾಧಿಕ ಉದ್ದೇಶಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡುವುದು. ಗರಿಷ್ಟ ಮೂರು ವರ್ಷ ಶಿಕ್ಷೆ ನೀಡಲಾಗುತ್ತದೆ. 354 c – ಮಹಿಳೆಯ ಇಚ್ಚೆಗೆ ವಿರುದ್ದವಾಗಿ ಆಕೆಯ ಖಾಸಗಿ ವಿಷಯವನ್ನ ರೆಕಾರ್ಡ್ ಮಾಡುವುದು ಮತ್ತು ನೋಡುವುದು. ಗರಿಷ್ಟ ಏಳು ವರ್ಷ ಶಿಕ್ಷೆ ನೀಡಲಾಗುತ್ತದೆ.