ಮನೆ ರಾಜ್ಯ ಇಂದು, ನಾಳೆ ಧಾರಾಕಾರ ಮಳೆ ಸಾಧ್ಯತೆ: 16 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ಇಂದು, ನಾಳೆ ಧಾರಾಕಾರ ಮಳೆ ಸಾಧ್ಯತೆ: 16 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

0

ಬೆಂಗಳೂರು (Bengaluru)-ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮತ್ತು 19ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ 16 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್‌’ ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ 18ರಂದು ಆರೆಂಜ್ ಅಲರ್ಟ್‌ ಹಾಗೂ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಇರಲಿದೆ. ಕರಾವಳಿಯಲ್ಲಿ ಗಂಟೆಗೆ ಗರಿಷ್ಠ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.