ಮನೆ ಅಪರಾಧ ಪಾಂಡವಪುರ ಆರೋಗ್ಯ ಇಲಾಖೆ ಕ್ವಾರ್ಟರ್ಸ್​ ನಲ್ಲಿ ಭ್ರೂಣಲಿಂಗ ಪತ್ತೆ: ಮೂವರು ಪೊಲೀಸರ ವಶಕ್ಕೆ

ಪಾಂಡವಪುರ ಆರೋಗ್ಯ ಇಲಾಖೆ ಕ್ವಾರ್ಟರ್ಸ್​ ನಲ್ಲಿ ಭ್ರೂಣಲಿಂಗ ಪತ್ತೆ: ಮೂವರು ಪೊಲೀಸರ ವಶಕ್ಕೆ

0

ಮಂಡ್ಯ: ಪಾಂಡವಪುರ ಆರೋಗ್ಯ ಇಲಾಖೆ ಕ್ವಾರ್ಟರ್ಸ್​ ನಲ್ಲಿ ಭ್ರೂಣಲಿಂಗ ಪತ್ತೆ  ಮತ್ತು ಹತ್ಯೆ ನಡೆಯುತ್ತಿರುವ ವಿಚಾರ ತಿಳಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರವಿಂದ್ ಮತ್ತು ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ.

Join Our Whatsapp Group

ದಾಳಿ ವೇಳೆ ಗರ್ಭಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ಗರ್ಭಪಾತ ಮಾಡುವ ಯಂತ್ರೋಪಕರಣಗಳು ‌ಜಪ್ತಿ ಮಾಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪಾಂಡವಪುರ ತಾಲೂಕು ಆಸ್ಪತ್ರೆ ಆ್ಯಂಬುಲೆನ್ಸ್​ ಚಾಲಕ ಆನಂದ್, ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಡಿ ಗ್ರೂಪ್ ಸಿಬ್ಬಂದಿ ಅಶ್ವಿನಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕ ಆನಂದ್​ಗೆ ನೀಡಲಾಗಿದ್ದ ಸರ್ಕಾರಿ ನಿವಾಸದಲ್ಲೇ ಕೃತ್ಯ ಎಸಗಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಡರಾತ್ರಿ ದಾಳಿ ಮಾಡಿದ್ದಾರೆ. ಈ ದಂಧೆಯಲ್ಲಿ ಕೆಲವು ವೈದ್ಯಾಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ದಾಖಲಾಗಿದೆ.