ಭರಮಸಾಗರ: ಸಮೀಪದ ರಾ.ಹೆ 48 ರ ಹುಣಸೆಕಟ್ಟೆ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಟ್ರೇಶಪ್ಪ (65) ಪುಷ್ಪಾ (55) ಮೃತರು.
ಚಾಲಕನ ನಿಯಂತ್ರಣ ತಪ್ಪಿ ಕಾರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗೆ ಉರುಳಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ . ಕಾರಿನಲ್ಲಿದ್ದ ಇತರೆ ನಾಲ್ವರಿಗೆ ಗಂಭೀರ ಗಾಯಗೊಂಡು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.














