ಮನೆ ರಾಜ್ಯ ಮುಧೋಳ: ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

ಮುಧೋಳ: ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

0

ಮುಧೋಳ: ಚುನಾವಣೆ ಕರ್ತವ್ಯಕ್ಕಾಗಿ ತೆರಳುತ್ತಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮಾರ್ಗಮಧ್ಯೆ ಮೃತಪಟ್ಟಿರುವ ಘಟನೆ ನಗರದ ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

Join Our Whatsapp Group

ಮುಧೋಳ‌ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿ ಗೋವಿಂದಪ್ಪ‌ ಸಿದ್ದಾಪುರ (47) ಮೃತ ಶಿಕ್ಷಕರು. ಅವರು ಬಿದರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಜಮಖಂಡಿ ಮತಕ್ಷೇತ್ರದಲ್ಲಿ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಳಿಸಿದ್ದರಿಂದ ಸೋಮವಾರ ಬೆಳಗ್ಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಬಸ್ ನಿಲ್ದಾಣದ ಬಳಿ ಏಕಾಏಕಿ ಎದೆನೋವು ಕಾಣಿಸಿಕೊಂಡ ಪರಿಣಾಮ ಶಿಕ್ಷಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.