ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ ಐಟಿ ಎಂಬುದು ಈಗ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಆಗಿದೆ. ನಿಜವಾಗಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶ ಅವರದ್ದಾಗಿದ್ದರೆ ವಿಡಿಯೋ ಹರಿಯಬಿಟ್ಟವರನ್ನು ಯಾಕೆ ಇನ್ನೂ ಬಂಧಿಸಿಲ್ಲ? ಆ ವಿಚಾರವಾಗಿ ದೂರು ನೀಡಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.
ಪ್ರಜ್ವಲ್ ಪ್ರಕರಣದಲ್ಲಿ 16 ವರ್ಷ ವಯಸ್ಸಿನ ಬಾಲಕಿಯೂ ಸಂತ್ರಸ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಹಿರಂಗವಾಗಿ ಹೇಳಿದ್ದಾರೆ. ಯಾವ ಆಧಾರದ ಮೇಲೆ ರಾಹುಲ್ ಗಾಂಧಿ ಆ ಹೇಳಿಕೆ ನೀಡಿದರು? ಆ ಬಗ್ಗೆ ಎಸ್ಐಟಿ ಯಾಕೆ ಇನ್ನೂ ತನಿಖೆ ಮಾಡಿಲ್ಲ? 400 ಮಹಿಳೆಯರನ್ನು ಅತ್ಯಾಚಾರ ಮಾಡಲಾಗಿದೆ ಎನ್ನುತ್ತಾರೆ. ಹಾಗಾದರೆ ಯಾಕೆ ರಾಹುಲ್ ಗಾಂಧಿಯವರನ್ನು ಇನ್ನು ಬಿಟ್ಟಿದ್ದಾರೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
2,900 ಕೇಸ್ ಇದೆ ಎಂದು ಹೇಳುತ್ತಾರೆ. ಆದರೂ ಒದ್ದಾಡುತ್ತಾರೆ. ಯಾವ ಸಂತ್ರಸ್ತೆಯರೂ ಸಿಗುತ್ತಿಲ್ಲ ಎಂದು ಒದ್ದಾಡುತ್ತಿದ್ದಾರೆ. ಆ ಸಂತ್ರಸ್ತೆಯರಿಗೆ ಏನು ಸ್ಥೈರ್ಯ ತುಂಬುತ್ತೀರಿ ನೀವು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ನಾನು ಪ್ರಜ್ವಲ್ ರೇವಣ್ಣರನ್ನ ವಹಿಸಿಕೊಂಡು ಮಾತನಾಡುತ್ತಿಲ್ಲ. ಒಂದು ತನಿಖೆ ಪ್ರಾರಂಭ ಮಾಡಿದಾಗ ಮಾಹಿತಿ ಸೋರಿಕೆ ಆಗಬಾರದು. ಸರ್ಕಾರಕ್ಕೆ, ಸಂತ್ರಸ್ತೆಯರಿಗೆ ರಕ್ಷಣೆ ಕೊಡುವುದು ಬೇಕಾಗಿಲ್ಲ. ಈ ಸರ್ಕಾರಕ್ಕೆ ಬೇಕಾಗಿರುವುದು ಕೇವಲ ಪ್ರಚಾರ ಅಷ್ಟೇ. ಏ.22ರಂದು ಬೇಲೂರಿನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಏ.22ರಂದು ಪ್ರಜ್ವಲ್ ಪಕ್ಕದಲ್ಲಿ ಕುಳಿತ ಹೆಣ್ಣು ಮಗಳು ಯಾರು? ಏ.21ರಂದು ಬಿಡುಗಡೆಯಾದ ವಿಡಿಯೋದಲ್ಲಿರುವುದು ಯಾರು? ಅತ್ಯಾಚಾರ ಆಗಿದ್ರೆ ಆ ಹೆಣ್ಮಗಳು ಯಾಕೆ ಒಂದೇ ವೇದಿಕೆಯಲ್ಲಿ ಇರುತ್ತಿದ್ದರು?ಪ್ರಜ್ವಲ್ ಪಕ್ಕ ಆ ಹೆಣ್ಣು ಮಗಳು ಯಾಕೆ ಕುಳಿತುಕೊಳ್ಳುತ್ತಿದ್ದರು ಎಂದು ಪ್ರಶ್ನಿಸಿದರು.
ಡಿಸಿಎಂ ಡಿಕೆ ಶಿವಕುಮಾರ್ ಹಸ್ತಕ್ಷೇಪದಲ್ಲಿ ನಡೆಯುವ ತನಿಖೆಯಿಂದ ವಾಸ್ತವ ಹೊರಬರುವುದಿಲ್ಲ. ಅಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇಟ್ಟುಕೊಂಡು ತನಿಖೆ ಮಾಡಿದರೆ ಸೂಕ್ತ ರೀತಿಯಲ್ಲಿ ತನಿಖೆ ಸಾಗದು. ಹೀಗಾಗಿ ಅವರನ್ನು ಸಂಪುಟದಿಂದ ವಜಾಗೊಳಿಸಿ ತನಿಖೆ ಮುಂದುವರಿಸಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಪ್ರಜ್ವಲ್ ಪ್ರಕರಣದ ಪಾರದರ್ಶಕ ತನಿಖೆಯಾಗಬೇಕಿದೆ. ಎಸ್ಐಟಿಯಿಂದ ನ್ಯಾಯಯುತವಾದ ತನಿಖೆ ಸಾಗದು. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದೂ ಕುಮಾರಸ್ವಾಮಿ ಆಗ್ರಹಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.