ಬೆಂಗಳೂರು : ಹೆಚ್ಡಿ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.08) ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್ ಆದೇಶಿಸಿದೆ.
ಏಳು ದಿನದವರೆಗೆ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ಈ ಹಿನ್ನಲೆ ರೇವಣ್ಣರನ್ನು ಎಸ್‌ಐಟಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯುತ್ತಿದ್ದಾರೆ.
ಪ್ರಕರಣ ಸಂಬಂಧ ಎಸ್ ಐಟಿ ಕಸ್ಟಡಿಯಲ್ಲಿರುವ ರೇವಣ್ಣ ಆಪ್ತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ತನಿಖೆ ಭರದಿಂದ ಸಾಗಿದೆ. ಇನ್ನು ರೇವಣ್ಣ ಪರ ಜಾಮೀನಿಗೆ ಅವರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಕಸ್ಟಡಿಯಲ್ಲಿರೋ ವ್ಯಕ್ತಿಗೆ ಜಾಮೀನು ಕೊಡುವುದು ಹೇಗೆ ಎಂದು ನ್ಯಾಯಾಧೀಶರು ರೇವಣ್ಣ ಪರ ವಕೀಲರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ವಕೀಲರು ವಾದ ಮುಂದಿಟ್ಟಿದ್ದರ. ಆದರೂ ಈ ಬಗ್ಗೆ ಎಸ್‌ಐಟಿ ಪ್ರತಿಕ್ರಿಯಿಸಲಿ ಅಂತಾ ಎಸ್ಐಟಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಅದರಂತೆ ಇಂದು ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.
ಇನ್ನು ಕೋರ್ಟ್ ಹಾಲ್ ನಲ್ಲಿಯೇ ರೇವಣ್ಣ ಇದ್ದು, ನ್ಯಾಯಾಲಯದ ಕಟ್ಟಡದಿಂದ ರೇವಣ್ಣ ಕಣ್ಣೀರು ಹಾಕುತ್ತಾ ಬಂದಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.