ಮೈಸೂರು: ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು ಈ ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ್ಯಾಂಕ್ ಪಡೆಯಬೇಕು; ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕೆಂದು ಆಶಿಸಿದರು.
ಅವರು ಇಂದು ಮೈಸೂರಿನಲ್ಲಿ ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೂಡ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದಾಗಿದೆ. 1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.
ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನ ಪಡೆದಿದೆ. ಈ ಬಾರಿ ಐದರೊಳಗೆ ಬರಬೇಕು ಎಂದು ಸೂಚಿಸಿದ್ದೆ. ಏಳನೇ ಸ್ಥಾನ ಪಡೆದಿದೆ. ಮುಂದಿನ ಬಾರಿ ಈ ಗುರಿ ಸಾಧಿಸುವಂತೆ ತಿಳಿಸಲಾಗುವುದು.
ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುವುದಿಲ್ಲ. ಈ ಕಾರಣಕ್ಕೆ ಬಸವಣ್ಣನವರ ಮೂರ್ತಿಗೆ ಹಾರ ಹಾಕಿ, ಅವರನ್ನು ಸ್ಮರಿಸುತ್ತಾ, ಅವರ ವಿಚಾರಗಳನ್ನು ಸ್ಮರಿಸಿ, ಆ ದಾರಿಯಲ್ಲಿ ನಡೆಯುವ ಸಂಕಲ್ಪ ಮಾಡಿದ್ದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.