ಮನೆ ಕಾನೂನು ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ ಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು

ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ ಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು

0

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಅಲ್ಪಕಾಲದ ರಿಲೀಫ್ ಸಿಕ್ಕಿದೆ.

Join Our Whatsapp Group

ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿತು ಆದೇಶ ಹೊರಡಿಸಿದೆ. ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಭಾಗಿಯಾಗಬಹುದು ಎಂದು ಸುಪ್ರೀಂ ಹೇಳಿದೆ.

ಅರವಿಂದ್ ಕೇಜ್ರಿವಾಲ್‌ಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್ ಜೂನ್ 2 ರಂದು ಶರಣಾಗಲು ಹೇಳಿದೆ.

ಜೂನ್ 4 ರಂದು ಫಲಿತಾಂಶ ಪ್ರಕಟವಾಗುವವರೆಗೆ ಮಧ್ಯಂತರ ಜಾಮೀನು ನೀಡುವಂತೆ ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಜೂನ್ 2ರಂದು ಶರಣಾಗಲು ಸೂಚನೆ ನೀಡಿದೆ.