ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆ ಅಪಹಿರಸಿದ ಆರೋಪದ ಮೇಲೆ ಜೈಲು ಸೇರಿದ್ದ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ ಸೋಮವಾರ ಷರತ್ತು ಬದ್ಧ ಜಾಮೀನು ಮಂಜೂರು ಆಗಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಹೆಚ್ಡಿ ರೇವಣ್ಣ ಅವರು ಮಂಗಳವಾರ ಬಿಡುಗಡೆಯಾಗುತ್ತಾರೆ ಎಂಬ ವಿಚಾರ ತಿಳಿದಿದ್ದ ಅವರ ಬೆಂಬಲಿಗರು ಮತ್ತು ನೂರಾರು ಜೆಡಿಎಸ್ ಕಾರ್ಯಕರ್ತರು ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ಜಮಾಯಿಸಿದ್ದರು. ಹೆಚ್ಡಿ ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, ಅವರ ಅಭಿಮಾನಿಗಳು ಜಯ ಘೋಷಣೆ ಹಾಕಿ ಸಂಭ್ರಮಿಸಿದರು. ಕಾರಾಗೃಹದ ಮುಂದೆ ಸೇರಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದರು.
ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರಿಗೆ ನ್ಯಾಯಾಲಯ ಸೋಮವಾರವೇ ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನು ನೀಡುವಷ್ಟರಲ್ಲಿ ನ್ಯಾಯಾಲಯದ ಸಮಯ ಆಗಿದ್ದರಿಂದ ಕೋರ್ಟ್ ಪ್ರಕ್ರಿಯೆಗಳು ಇಂದಿಗೆ (ಮೇ 14) ಮುಂದೂಡಲಾಗಿತ್ತು. ಹೀಗಾಗಿ ಹೆಚ್ಡಿ ರೇವಣ್ಣ ಸೋಮವಾರದ ರಾತ್ರಿಯನ್ನು ಜೈಲಿನಲ್ಲೇ ಕಳೆದರು. ಮಂಗಳವಾರ ಕೋರ್ಟ್ ಪ್ರಕ್ರಿಯೆಗಳು ಮುಗಿದಿದ್ದು, ಇದೀಗ ಜೈಲಿಂದ ಬಿಡುಗಡೆಯಾಗಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.