ಮನೆ ರಾಜ್ಯ ಧಾರಾಕಾರ ಮಳೆ ಸಾಧ್ಯತೆ: 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಧಾರಾಕಾರ ಮಳೆ ಸಾಧ್ಯತೆ: 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

0

ಬೆಂಗಳೂರು (Bengaluru)- ರಾಜ್ಯದಲ್ಲಿ ಇಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ 7 ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ.

ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್‌’ ಹಾಗೂ ತುಮಕೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಕರಾವಳಿಯಲ್ಲಿ ಗಂಟೆಗೆ ಗರಿಷ್ಠ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ. ಮೇ 21ರ ಬಳಿಕ ರಾಜ್ಯದಾದ್ಯಂತ ಮಳೆ ತಗ್ಗುವ ಸಾಧ್ಯತೆ ಇದೆ.