ಬೆಂಗಳೂರು: ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಭಾರಿ ಮಳೆಯಾದರೆ ಇನ್ನು ಕೆಲವಡೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೂರು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯಾಗುವ ಪ್ರದೇಶಗಳ ಗರಿಷ್ಠ ತಾಪಮಾನದಲ್ಲಿ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಬಹುದು ಎಂದೂ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ 2023 ರ ಡಿಸೆಂಬರ್ನಿಂದ ಈ ಏಪ್ರಿಲ್ ವರೆಗೆ ಮಳೆಯಾಗಿರಲಿಲ್ಲ. ಆದರೆ, ಮುಂದಿನ ಐದು ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಮತ್ತು ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ.
ಯಾವ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್?
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮೇ 21 ರವರೆಗೆ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ಗುಡುಗು, ಮಿಂಚು ಸಹಿತ 7 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಮತ್ತು ಕರಾವಳಿ ಕರ್ನಾಟಕದ ಶೇ 75 ಕ್ಕಿಂತ ಹೆಚ್ಚು ಮತ್ತು ಉತ್ತರ ಒಳನಾಡಿನಲ್ಲಿ ಶೇ 25-50 ರಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಬರುವ ದಿನಗಳಲ್ಲಿ ಗರಿಷ್ಠ ನಿರೀಕ್ಷಿತ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದೆ. ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಾರದು ಎಂದೂ ಇಲಾಖೆ ಹೇಳಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.