ಮನೆ ಹವಮಾನ ರಾಜ್ಯದಲ್ಲಿ ಮೇ 22 ರವರೆಗು ಮಳೆ: 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮೇ 22 ರವರೆಗು ಮಳೆ: 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

0

ಬೆಂಗಳೂರು: ರಾಜ್ಯದಲ್ಲಿ‌ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಇಂದು (ಮೇ 20) ಮುಂಗಾರ ಎಫೆಕ್ಟ್ ಜೋರಾಗಿಯೇ ಇರಲಿದೆ.

Join Our Whatsapp Group

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಜೋರಾಗಿಯೇ ಆಗುತ್ತಿದೆ. ಇಂದಿನಿಂದ ಐದು ದಿನ ರಾಜ್ಯದ 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ‌ ಮಾಡಲಾಗಿದೆ. ಮೇಲ್ಮೈ ಸುಳಿಗಾಳಿ, ಟಫ್ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಭಾರಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸೋಮವಾರ ಮೋಡ ಕವಿದ ವಾತಾವರಣ ಇರಲಿದ್ದು, ಇಂದಿನಿಂದ ಮೇ 22 ರವರೆಗೂ ಮಳೆಯ ಅಲರ್ಟ್‌ ನೀಡಲಾಗಿದೆ. ಹಾಗೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಇಂದಿನಿಂದ ಐದು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೆ ಕರಾವಳಿ ಭಾಗಕ್ಕೂ ಆರೆಂಜ್ ಅಲರ್ಟ್ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ದಕ್ಷಿಣ, ಉಡುಪಿ, ಮಂಗಳೂರು ಭಾಗಕ್ಕೆ ಹೆಚ್ಚು ಮಳೆಯಾಗುವ ಸಾಧ್ಯಾತೆ ಇದೆ ಅಂತ ಹವಮಾನ ಇಲಾಖೆ ಹೇಳಿದೆ.