ಮನೆ ಕಾನೂನು ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ; ಹೈಕೋರ್ಟ್ ​ಗೆ ಎಸ್ಎಸ್​ಪಿಪಿ ನೇಮಕ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ; ಹೈಕೋರ್ಟ್ ​ಗೆ ಎಸ್ಎಸ್​ಪಿಪಿ ನೇಮಕ

0

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಹೈಕೋರ್ಟ್​ಗೆ ಸಲ್ಲಿಕೆಯಾಗುವ ಪ್ರಕರಣಗಳಲ್ಲಿ ಸಿಐಡಿ ಪರವಾಗಿ ವಾದ ಮಂಡಿಸಲು ಮಾಜಿ ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

Join Our Whatsapp Group

ಪ್ರೊ. ರವಿವರ್ಮ ಕುಮಾರ್ ಅವರನ್ನು ಎಸ್​ಪಿಪಿಯನ್ನಾಗಿ ಸರ್ಕಾರದ ಗೃಹ ಇಲಾಖೆಯ ಉಪ ಕಾರ್ಯದರ್ಶಿ ಕೆ. ಎಂ. ರಾಜೇಂದ್ರ ಕುಮಾರ್ ಅವರು ಆದೇಶಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಸಿಐಡಿ ಪೊಲೀಸರು, ಹೊಳೆನರಸೀಪುರ ಪೊಲೀಸರು ಮತ್ತು ಕೆ.ಆರ್. ನಗರ ಪೊಲೀಸರು ದಾಖಲಿಸಿರುವ ಸಂಬಂಧ ವಿಚಾರಣಾ ನ್ಯಾಯಾಲಯದಲ್ಲಿ ವಾದ ಮಂಡಿಸಲು ವಕೀಲರಾದ ಆಶೋಕ್ ನಾಯಕ್ ಮತ್ತು ಜೈನಾ ಕೊಥಾರಿ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ.

ಈ ಪ್ರಕರಣಗಳಲ್ಲಿ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಅಥವಾ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದಲ್ಲಿ ಆ ಪ್ರಕರಣಗಳ ಕುರಿತು ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ.