ಮನೆ ರಾಜ್ಯ ಹೈನುಗಾರರ ₹703 ಕೋಟಿ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಆಗ್ರಹ

ಹೈನುಗಾರರ ₹703 ಕೋಟಿ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಆಗ್ರಹ

0

ಬೆಂಗಳೂರು:  ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಹೈನುಗಾರರ ₹703 ಕೋಟಿ ಪ್ರೋತ್ಸಾಹಧನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.

Join Our Whatsapp Group

ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರವು ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ ₹703 ಕೋಟಿ ಪ್ರೋತ್ಸಾಹಧನವನ್ನು ಕಳೆದ 8 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಎಂದು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ‘ನಂದಿನಿ’ ಹೆಸರಲ್ಲಿ ರಾಜಕೀಯ ಮಾಡಿ, ಈಗ ಅಮೃತದಂತಹ ಹಾಲು ಕೊಡುವ ರೈತರ ಬಾಳಲ್ಲಿ ವಿಷ ಹಿಂಡುವ ಪಾಪದ ಕೆಲಸ ಮಾಡುತ್ತಿದ್ದೀರಲ್ಲ, ಇದೇನಾ ನೀವು ನಮ್ಮ ‘ನಂದಿನಿ’ ಬ್ರ್ಯಾಂಡ್ ಉಳಿಸುವ ಪರಿ ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಅವರೇ, ನಂದಿನಿ ಸಂಸ್ಥೆಯ ಕೋಟ್ಯಂತರ ರೂಪಾಯಿ ಹಣ ಬಳಸಿಕೊಂಡು ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪ್ರಾಯೋಜಕತ್ವ ಪಡೆಯಲು ನಿಮ್ಮ ಬಳಿ ಹಣವಿದೆ. ಆದರೆ, ನಂದಿನಿ ಬ್ರ್ಯಾಂಡ್ ಅನ್ನು ಕಟ್ಟಿ, ಬೆಳೆಸಿ, ಪೋಷಿಸುತ್ತಿರುವ ಹೈನುಗಾರರಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹಧನ ನೀಡಲು ಮಾತ್ರ ಹಣವಿಲ್ಲ. ನಾಡಿನ ರೈತರ ಶಾಪ ನಿಮಗೆ ತಟ್ಟದೇ ಇರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.