ಮನೆ ರಾಜ್ಯ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ವೀಕ್ಷಿಸುವುದು ಹೇಗೆ?

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ವೀಕ್ಷಿಸುವುದು ಹೇಗೆ?

0

ಬೆಂಗಳೂರು(Bengaluru): ಇಂದು ಮಧ್ಯಾಹ್ನ ಕರ್ನಾಟಕ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗಿರುವ ರಾಜ್ಯದ ಎಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಫಲಿತಾಂಶವನ್ನು ತಿಳಿಯಲು ಕಾತುರರಾಗಿದ್ದಾರೆ.

ಇಂದು ಮಧ್ಯಾಹ್ನ 12.30ಕ್ಕೆ 2022ರ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 1 ಗಂಟೆಯ ನಂತರ ಆನ್‌ಲೈನಿನಲ್ಲಿ (ಇಲಾಖೆಯ ಅಧಿಕೃತ ವೆಬ್‌ಸೈಟ್) ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ನಂಬರ್‌ಗಳಿಗೆ SMS ಮೂಲಕವೂ ಫಲಿತಾಂಶವನ್ನು ಕಳುಹಿಸಲಾಗುತ್ತದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಎಸ್ ಎಸ್ ಎಲ್ ಸಿ ರಿಸಲ್ಟ್ ಅನ್ನು ಪ್ರಕಟಿಸಲಾಗುತ್ತದೆ. karresults.nic.in ವೆಬ್‌ಸೈಟ್‌ ನಲ್ಲಿ 2022ರ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ವೀಕ್ಷಿಸಬಹುದು.

ಈ ವೆಬ್‌ತಾಣವನ್ನು ತೆರೆದಾಕ್ಷಣವೇ ಎಸ್ ಎಸ್ ಎಲ್ ಸಿ ರಿಸಲ್ಟ್ ಅನ್ನು ನೋಡಲು ಹೊಸ ವಿಂಡೋವೊಂದನ್ನು ತೆರೆಯಲಾಗಿದೆ. ಆ ವಿಂಡೋದಲ್ಲಿ ಸರಿಯಾದ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕದ ಮಾಹಿತಿಯನ್ನು ಒದಗಿಸಿ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.

ಫಲಿತಾಂಶದ ಪೇಜ್‌ ಓಪನ್‌ ಆಗುತ್ತದೆ. ಪೇಜ್ ಅನ್ನು ಡೌನ್‌ಲೋಡ್‌ ಮಾಡಿಕೊಂಡು ಪ್ರಿಂಟ್‌ ತೆಗೆದುಕೊಳ್ಳುವ ಆಯ್ಕೆ ಸಿಗಲಿದೆ. ಎಲ್ಲರೂ ಒಂದೇ ಸಲ ಫಲಿತಾಂಶವನ್ನು ನೋಡುವ ಕಾರಣಕ್ಕೆ, ಸರ್ವರ್‌ ಡೌನ್ ಆಗಿ ಫಲಿತಾಂಶ ತೋರಿಸದೇ ಇರುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ, ಭಯ ಪಡದೆ ಮತ್ತೊಮ್ಮೆ ಫಲಿತಾಂಶವನ್ನು ತಿಳಿಯಲು ಪ್ರಯತ್ನಿಸಿ.