ಬೆಂಗಳೂರು: ಬೆಂಗಳೂರಿನ ಮೂರು ಫೈವ್ ಸ್ಟಾರ್ ಹೋಟೆಲ್ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಎಲೆಕ್ಟ್ರಾನಿಕ್ ಸಿಟಿ ಬಳಿಯ ಸ್ಟಾರ್ ಹೋಟೆಲ್ಗೆ ಬೆದರಿಕೆ ಸಂದೇಶ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೋಟೆಲ್ ಗೆ ಪೊಲೀಸರು ಭೇಟಿ ನೀಡಿದ್ದಾರೆ. ಬಾಂಬ್ ಸ್ಕ್ವಾಡ್ ಸಹ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದೆ.
ಕೆಲವೇ ದಿನಗಳ ಹಿಂದೆ, ಅಂದರೆ ಮೇ 13ರಂದು ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಅದರ ಮರುದಿನವೇ ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಕಗ್ಗಲಿಪುರದ ಕನಕಪುರ ರಸ್ತೆ ಸೋಮನಹಳ್ಳಿ ಬಳಿಯ ಈಡಿಫೈ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಪರಿಶೀಲನೆಯ ನಂತರ ಈ ಎರಡೂ ಬೆದರಿಕೆ ಸಂದೇಶಗಳು ಹುಸಿ ಎಂಬುದು ತಿಳಿದುಬಂದಿತ್ತು.
ಕಳೆದ ತಿಂಗಳು ಜಾಲಹಳ್ಳಿ ಠಾಣೆ ವ್ಯಾಪ್ತಿಯ ಎಚ್‌ಎಂಟಿ ಮೈದಾನ ಬಳಿಯ ಕದಂಬ ಹೋಟೆಲ್ ಸುತ್ತಮುತ್ತ ಬಾಂಬ್ ಇರಿಸಲಾಗಿದೆ ಎಂದು ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದ್ದು ಆತಂಕಕ್ಕೆ ಕಾರಣವಾಗಿತ್ತು. ನಂತರ ಅದು ಹುಸಿ ಬೆದರಿಕೆ ಎಂಬುದು ತಿಳಿದುಬಂದಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.