ಮನೆ ರಾಜಕೀಯ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

0

ಉಡುಪಿ: ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್ ಅವರು ಬಂಡಾಯದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.

Join Our Whatsapp Group

ಉಡುಪಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಸುನಿಲ್ ಕುಮಾರ್ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು ಇಲ್ಲವಾದಲ್ಲಿ ಪಕ್ಷದ ನಿಯಮ ಉಲ್ಲಂಘಿಸಿದ ಆಧಾರದ ಮೇಲೆ ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯ ಎಂದು ಹೇಳಿದರು.

ಪಕ್ಷ ವಿರೋಧಿ ಚಟುವಟಿಕೆ ಅಥವಾ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾರೇ ಇದ್ದರು ಕೂಡ ಅವರ ಮೇಲೆ ಪಕ್ಷ ಕಂಡಿತವಾಗಿಯೂ ಕ್ರಮಕೈಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು. ಪಕ್ಷದಲ್ಲಿ ಎಲ್ಲರಿಗೂ ಒಂದೇ ಕ್ರಮ ಹಾಗಾಗಿ ಒಬ್ಬರಿಗೆ ಒಂದು ಇನ್ನೊಬ್ಬರಿಗೆ ಒಂದು ಅಂತ ಇಲ್ಲ. ಹಾಗಾಗಿ ರಘುಪತಿ ಭಟ್ ಅವರು ಬಂಡಾಯದಿಂದ ಹಿಂದೆ ಸರಿಯುತ್ತಾರೆ ಎಂಬ ವಿಶ್ವಾಸವಿದೆ, ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಯಾರೇ ಸ್ಪರ್ಧೆ ಮಾಡಿದರೂ ಅವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಹೇಳಿದರು.